ನವದೆಹಲಿ: ಅಮೆರಿಕದ ಗ್ಲೋಬಲ್ ಫೈನಾನ್ಸ್ ನಿಯತಕಾಲಿಕ ನೀಡುವ 2024ನೇ ಸಾಲಿನ ‘ಭಾರತದ ಅತ್ಯುತ್ತಮ ಬ್ಯಾಂಕ್’ ಪ್ರಶ್ತಸಿಗೆ, ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಭಾಜನವಾಗಿದೆ.
ಅಮೆರಿಕದ ವಾಷಿಂಗ್ಟನ್‌ನಲ್ಲಿ ನಡೆದ ನಿಯತಕಾಲಿಕದ 31ನೇ ವಾರ್ಷಿಕ ಸಭೆಯಲ್ಲಿ ಎಸ್‌ಬಿಐ ಅಧ್ಯಕ್ಷ ಸಿ.ಎಸ್. ಸೆಟ್ಟಿ ಅವರು, ಈ ಪ್ರಶಸ್ತಿ ಸ್ವೀಕರಿಸಿದರು.
‘ಬ್ಯಾಂಕ್ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿದೆ. ಗ್ರಾಹಕರ ವಿಶ್ವಾಸಾರ್ಹತೆ ಗಳಿಸುವ ಮೂಲಕ ಅವರನ್ನು ಆರ್ಥಿಕತೆಯಲ್ಲಿ ಪಾಲ್ಗೊಳ್ಳುವಿಕೆಗೆ ಉತ್ತೇಜನ ನೀಡುತ್ತಿದೆ. ಬ್ಯಾಂಕ್‌ನ ಬದ್ಧತೆ ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ’ ಎಂದು ಎಸ್‌ಬಿಐ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.