ಮುಂಬೈ: 2024–25ನೇ ಆರ್ಥಿಕ ವರ್ಷದ ಸೆಪ‍್ಟೆಂಬರ್ ತ್ರೈಮಾಸಿಕದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ₹19,782 ಕೋಟಿ ನಿವ್ವಳ ಲಾಭ ಗಳಿಸಿದೆ.
ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹16,099 ಕೋಟಿ ಲಾಭ ಗಳಿಸಿತ್ತು. ಈ ಲಾಭದ ಪ್ರಮಾಣಕ್ಕೆ ಹೋಲಿಸಿದರೆ ಶೇ 23ರಷ್ಟು ಏರಿಕೆಯಾಗಿದೆ ಎಂದು ಬ್ಯಾಂಕ್ ಶುಕ್ರವಾರ ತಿಳಿಸಿದೆ.
ಬ್ಯಾಂಕ್‌ನ ಒಟ್ಟು ವರಮಾನವು ಕಳೆದ ವರ್ಷದ ಇದೇ ತ್ರೈಮಾಸಿಕದಲ್ಲಿ ₹1.12 ಲಕ್ಷ ಕೋಟಿ ಇತ್ತು. ಈ ಬಾರಿ ₹1.29 ಲಕ್ಷ ಕೋಟಿಗೆ ಏರಿಕೆಯಾಗಿದೆ. ವೆಚ್ಚದ ಪ್ರಮಾಣ ಹೆಚ್ಚಳವಾಗಿದ್ದು, ₹99,847 ಕೋಟಿ ಆಗಿದೆ.
ವಸೂಲಾಗದ ಸಾಲದ ಸರಾಸರಿ ಪ್ರಮಾಣ ಜೂನ್ ತ್ರೈಮಾಸಿಕದಲ್ಲಿ ಶೇ 2.21ರಷ್ಟಿತ್ತು. ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಶೇ 2.13ಕ್ಕೆ ಇಳಿದಿದೆ ಎಂದು ಬ್ಯಾಂಕ್ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.