ಮುಂಬೈ: ಸರ್ಕಾರಿ ಸ್ವಾಮ್ಯದ ಅತಿದೊಡ್ಡ ಬ್ಯಾಂಕ್ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ಪ್ರಸಕ್ತ ಹಣಕಾಸು ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ₹ 15,477 ಕೋಟಿ ನಿವ್ವಳ ಲಾಭ ಗಳಿಸಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಗೆ ಹೋಲಿಸಿದರೆ ಲಾಭವು ಶೇಕಡ 62ರಷ್ಟು ಹೆಚ್ಚಾಗಿದೆ.
ಡಿಸೆಂಬರ್ ತ್ರೈಮಾಸಿಕದಲ್ಲಿ ತೆರಿಗೆ ನಂತರದ ಲಾಭವು ₹ 14,205 ಕೋಟಿ ಆಗಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹ 8,432 ಕೋಟಿ ಲಾಭ ಆಗಿತ್ತು.
ಬ್ಯಾಂಕ್‌ನ ಒಟ್ಟು ವರಮಾನ ₹ 78,351 ಕೋಟಿಯಿಂದ ₹ 98,084 ಕೋಟಿಗೆ ಏರಿಕೆ ಕಂಡಿದೆ. ಕಾರ್ಯಾಚರಣೆ ವೆಚ್ಚವು ₹ 20,839 ಕೋಟಿಯಿಂದ ₹ 24,317 ಕೋಟಿಗೆ ಏರಿಕೆ ಆಗಿದೆ ಎಂದು ಷೇರುಪೇಟೆಗೆ ಮಾಹಿತಿ ನೀಡಿದೆ. ನಿವ್ವಳ ಬಡ್ಡಿ ವರಮಾನ ಶೇ 24.05ರಷ್ಟು ಹೆಚ್ಚಾಗಿ ₹38,069 ಕೋಟಿಗೆ ತಲುಪಿದೆ.
ಭವಿಷ್ಯದಲ್ಲಿ ಎದುರಾಗಬಹುದಾದ ಆರ್ಥಿಕ ನಷ್ಟ ಭರಿಸಲು ತೆಗೆದಿರಿಸುವ ಮೊತ್ತವು ಡಿಸೆಂಬರ್ ತ್ರೈಮಾಸಿಕದಲ್ಲಿ ₹ 1,586 ಕೋಟಿಗೆ ಇಳಿಕೆ ಆಗಿದೆ. ವಸೂಲಾಗದ ಸಾಲದ ಸರಾಸರಿ ಪ್ರಮಾಣವು ಶೇ 3.52 ರಿಂದ ಶೇ 3.14ಕ್ಕೆ ಇಳಿಕೆ ಕಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.