ನವದೆಹಲಿ: ಚಿನ್ನಾಭರಣಗಳಿಗೆ ಹಾಲ್‌ಮಾರ್ಕ್ ಕಡ್ಡಾಯ ಮಾಡುವ ನಿಯಮದ ಎರಡನೇ ಹಂತವು ಜೂನ್ 1ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಸರ್ಕಾರ ಶನಿವಾರ ತಿಳಿಸಿದೆ.
ಎರಡನೇ ಹಂತದಲ್ಲಿ 32 ಜಿಲ್ಲೆಗಳಲ್ಲಿ ಜಾರಿಗೆ ಬರಲಿ ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿದೆ.
ಮೊದಲ ಹಂತದಲ್ಲಿ 256 ಜಿಲ್ಲೆಗಳಲ್ಲಿ 14, 18 ಮತ್ತು 22 ಕ್ಯಾರೆಟ್‌ನ ಚಿನ್ನಾಭರಣಗಳಿಗೆ ಹಾಲ್‌ಮಾರ್ಕ್ ಕಡ್ಡಾಯವನ್ನು ಜಾರಿಗೆ ತರಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.