ADVERTISEMENT

Share Market: ಸೆನ್ಸೆಕ್ಸ್‌ 241 ಅಂಶ ಇಳಿಕೆ

ಪಿಟಿಐ
Published 18 ನವೆಂಬರ್ 2024, 16:01 IST
Last Updated 18 ನವೆಂಬರ್ 2024, 16:01 IST
ಸೆನ್ಸೆಕ್ಸ್‌
ಸೆನ್ಸೆಕ್ಸ್‌   

ಮುಂಬೈ: ವಿದೇಶಿ ಬಂಡವಾಳದ ಹೊರಹರಿವು ಮತ್ತು ಐ.ಟಿ ಷೇರುಗಳು ಮಾರಾಟದ ಒತ್ತಡಕ್ಕೆ ಸಿಲುಕಿದ್ದರಿಂದ ಸೋಮವಾರದ ವಹಿವಾಟಿನಲ್ಲಿ ಷೇರು ಸೂಚ್ಯಂಕಗಳು ಇಳಿಕೆ ಕಂಡಿವೆ.

ಮುಂಬೈ ಷೇರುಪೇಟೆ ಸೂಚ್ಯಂಕ (ಬಿಎಸ್‌ಇ) ಸೆನ್ಸೆಕ್ಸ್ 241 ಅಂಶ ಇಳಿಕೆಯಾಗಿ, 77,339ಕ್ಕೆ ಅಂತ್ಯಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 78 ಅಂಶ ಕಡಿಮೆಯಾಗಿ 23,453ಕ್ಕೆ ಸ್ಥಿರಗೊಂಡಿದೆ.

ಟಿಸಿಎಸ್, ಇನ್ಫೊಸಿಸ್, ಎನ್‌ಟಿಪಿಸಿ, ಎಚ್‌ಸಿಎಲ್‌ ಟೆಕ್ನಾಲಜೀಸ್, ಎಕ್ಸಿಸ್‌ ಬ್ಯಾಂಕ್‌, ಟೆಕ್‌ ಮಹೀಂದ್ರ, ಬಜಾಜ್‌ ಫಿನ್‌ಸರ್ವ್‌, ಸನ್‌ಫಾರ್ಮಾ, ಇಂಡಸ್‌ಇಂಡ್‌ ಬ್ಯಾಂಕ್‌ ಮತ್ತು ರಿಲಯನ್ಸ್‌ ಇಂಡಸ್ಟ್ರೀಸ್‌ನ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ.

ADVERTISEMENT

ಟಾಟಾ ಸ್ಟೀಲ್‌, ಹಿಂದುಸ್ತಾನ್ ಯೂನಿಲಿವರ್, ಮಹೀಂದ್ರ ಆ್ಯಂಡ್‌ ಮಹೀಂದ್ರ, ನೆಸ್ಲೆ, ಎಸ್‌ಬಿಐ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ.

ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಗುರುವಾರದ ವಹಿವಾಟಿನಲ್ಲಿ ₹1,849 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಏಷ್ಯನ್‌ ಮಾರುಕಟ್ಟೆಯಲ್ಲಿ ಸೋಲ್‌, ಹಾಂಗ್‌ಕಾಂಗ್‌ ಸಕಾರಾತ್ಮಕ ವಹಿವಾಟು ನಡೆಸಿದ್ದರೆ, ಟೋಕಿಯೊ ಮತ್ತು ಶಾಂಘೈ ನಕಾರಾತ್ಮಕ ವಹಿವಾಟು ನಡೆಸಿವೆ. 

ಜಾಗತಿಕ ಬ್ರೆಂಟ್‌ ಕಚ್ಚಾ ತೈಲ ದರ ಪ್ರತಿ ಬ್ಯಾರೆಲ್‌ಗೆ ಶೇ 0.49ರಷ್ಟು ಏರಿಕೆಯಾಗಿ, 71.39 ಡಾಲರ್‌ (₹6,026) ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.