ADVERTISEMENT

ಷೇರು‍ಪೇಟೆ ಸೂಚ್ಯಂಕ: ಸೆನ್ಸೆಕ್ಸ್, ನಿಫ್ಟಿ ಏರಿಕೆ

ಪಿಟಿಐ
Published 10 ಅಕ್ಟೋಬರ್ 2024, 13:20 IST
Last Updated 10 ಅಕ್ಟೋಬರ್ 2024, 13:20 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

‌ಮುಂಬೈ: ದೇಶದ ಷೇರುಪೇಟೆಯಲ್ಲಿ ಗುರುವಾರ ನಡೆದ ವಹಿವಾಟಿನಲ್ಲಿ ಸೂಚ್ಯಂಕಗಳು ಏರಿಕೆ ಕಂಡಿವೆ. ಬ್ಯಾಂಕಿಂಗ್‌, ಪವರ್‌ ಮತ್ತು ಇಂಡಸ್ಟ್ರಿಯಲ್‌ ವಲಯದ ಷೇರುಗಳ ಮಾರಾಟದ ಹೆಚ್ಚಳವು ಮಾರುಕಟ್ಟೆಯಲ್ಲಿ ಸಕಾರಾತ್ಮಕ ವಹಿವಾಟಿಗೆ ನೆರವಾಯಿತು.

ಮುಂಬೈ ಷೇರು‍ಪೇಟೆ ಸೂಚ್ಯಂಕ ಸೆನ್ಸೆಕ್ಸ್‌ 144 ಅಂಶ ಏರಿಕೆ ಕಂಡು 81,611 ಅಂಶಗಳಲ್ಲಿ ಸ್ಥಿರಗೊಂಡಿತು. ವಹಿವಾಟಿನ ಒಂದು ಸಂದರ್ಭದಲ್ಲಿ 535 ಅಂಶ ಹೆಚ್ಚಳ ಕಂಡಿತ್ತು. 

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 16 ಅಂಶ ಏರಿಕೆ ಕಂಡು 24,988 ಅಂಶಗಳಲ್ಲಿ ವಹಿವಾಟನ್ನು ಅಂತ್ಯಗೊಳಿಸಿತು. 

ADVERTISEMENT

ಸೆನ್ಸೆಕ್ಸ್ ಗುಚ್ಛದಲ್ಲಿನ ಕೋಟಕ್‌ ಮಹೀಂದ್ರ ಬ್ಯಾಂಕ್‌, ಜೆಎಸ್‌ಡಬ್ಲ್ಯು ಸ್ಟೀಲ್‌, ಎಚ್‌ಡಿಎಫ್‌ಸಿ ಬ್ಯಾಂಕ್‌, ಪವರ್ ಗ್ರಿಡ್‌, ಇಂಡಸ್‌ ಇಂಡ್‌ ಬ್ಯಾಂಕ್‌, ಮಾರುತಿ ಸುಜುಕಿ, ಎನ್‌ಟಿಪಿಸಿ, ಎಕ್ಸಿಸ್‌ ಬ್ಯಾಂಕ್‌ ಮತ್ತು ಮಹೀಂದ್ರ ಆ್ಯಂಡ್‌ ಮಹೀಂದ್ರ ಬ್ಯಾಂಕ್‌ನ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ.

ಟೆಕ್‌ ಮಹೀಂದ್ರ, ಸನ್‌ ಫಾರ್ಮಾ, ಇನ್ಫೊಸಿಸ್‌, ಟೈಟನ್‌, ಟಾಟಾ ಮೋಟರ್ಸ್‌, ಎಲ್‌ ಆ್ಯಂಡ್ ಟಿ, ಟಿಸಿಎಸ್‌ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ. 

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಶೇ 1.37ರಷ್ಟು ಏರಿಕೆಯಾಗಿದೆ. ಪ್ರತಿ ಬ್ಯಾರೆಲ್‌ಗೆ 77.63 ಡಾಲರ್‌ ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.