ಮುಂಬೈ: ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್‌ನ ಷೇರುಗಳು ಮಾರಾಟದ ಒತ್ತಡಕ್ಕೆ ಸಿಲುಕಿದ್ದರಿಂದ ಶುಕ್ರವಾರ ನಡೆದ ವಹಿವಾಟಿನಲ್ಲಿ ಷೇರು ಸೂಚ್ಯಂಕಗಳು ಇಳಿಕೆ ಕಂಡಿವೆ.
ಹೂಡಿಕೆದಾರರು ಲಾಭ ಮಾಡಿಕೊಳ್ಳುವ ಉದ್ದೇಶದಿಂದ ಷೇರುಗಳ ಮಾರಾಟಕ್ಕೆ ಮುಂದಾಗಿದ್ದರಿಂದ ದೇಶೀಯ ಷೇರುಪೇಟೆಯಲ್ಲಿ ನಕಾರಾತ್ಮಕ ವಹಿವಾಟು ನಡೆಯಿತು.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 264 ಅಂಶ ಇಳಿಕೆ ಕಂಡು, 85,571 ಅಂಶಗಳಲ್ಲಿ ವಹಿವಾಟು ಮುಕ್ತಾಯಗೊಂಡಿತು.
ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 37 ಅಂಶ ಇಳಿಕೆ ಕಂಡು 26,178 ಅಂಶಗಳಲ್ಲಿ ಸ್ಥಿರಗೊಂಡಿತು.
ಸೆನ್ಸೆಕ್ಸ್ ಗುಚ್ಛದಲ್ಲಿನ ಪವರ್ ಗ್ರಿಡ್, ಐಸಿಐಸಿಐ ಬ್ಯಾಂಕ್, ಭಾರ್ತಿ ಏರ್‌ಟೆಲ್, ಎಚ್‌ಡಿಎಫ್‌ಸಿ ಬ್ಯಾಂಕ್, ಕೋಟಕ್ ಮಹೀಂದ್ರ ಬ್ಯಾಂಕ್, ಎಲ್ ಆ್ಯಂಡ್ ಟಿ, ಅದಾನಿ ಪೋರ್ಟ್ಸ್ ಮತ್ತು ಅಲ್ಟ್ರಾಟೆಕ್ ಸಿಮೆಂಟ್ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ.
ಸನ್ ಫಾರ್ಮಾ, ರಿಲಯನ್ಸ್ ಇಂಡಸ್ಟ್ರಿಸ್, ಟೈಟನ್, ಎಚ್‌ಸಿಎಲ್ ಟೆಕ್ನಾಲಜೀಸ್, ಬಜಾಜ್ ಫಿನ್‌ಸರ್ವ್ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.