ಮುಂಬೈ: ಸತತ ಎರಡು ದಿನದಿಂದ ಏರಿಕೆ ಕಂಡಿದ್ದ ಷೇರು ಸೂಚ್ಯಂಕಗಳು, ಗುರುವಾರದ ವಹಿವಾಟಿನಲ್ಲಿ ಇಳಿಕೆ ಕಂಡಿವೆ.
ಅಮೆರಿಕದ ಕೇಂದ್ರೀಯ ಬ್ಯಾಂಕ್ ಆದ ಫೆಡರಲ್ ರಿಸರ್ವ್ ಬಡ್ಡಿದರ ಕಡಿತಗೊಳಿಸಲಿದೆ ಎಂಬ ಸುಳಿವಿನಿಂದಾಗಿ ಷೇರುಪೇಟೆಯಲ್ಲಿ ನಕಾರಾತ್ಮಕ ವಹಿವಾಟು ನಡೆಯಿತು. ಅಲ್ಲದೆ, ವಿದೇಶಿ ಬಂಡವಾಳದ ಹೊರಹರಿವಿನ ಹೆಚ್ಚಳವು ಇದಕ್ಕೆ ನೆರವಾಯಿತು.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 836 ಅಂಶ ಇಳಿಕೆ ಕಂಡು, 79,541 ಅಂಶಗಳಲ್ಲಿ ವಹಿವಾಟು ಮುಕ್ತಾಯಗೊಂಡಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 284 ಅಂಶ ಇಳಿಕೆ ಕಂಡು, 24,199 ಅಂಶಗಳಲ್ಲಿ ಸ್ಥಿರಗೊಂಡಿತು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ.
ಬುಧವಾರದ ವಹಿವಾಟಿನಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ₹4,445 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.