ADVERTISEMENT

ದೇಶದ ಷೇರುಪೇಟೆಯಲ್ಲಿ ಸಕಾರಾತ್ಮಕ ವಹಿವಾಟು

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2024, 16:21 IST
Last Updated 19 ಸೆಪ್ಟೆಂಬರ್ 2024, 16:21 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

‌ಮುಂಬೈ: ಅಮೆರಿಕದ ಕೇಂದ್ರೀಯ ಬ್ಯಾಂಕ್‌ ಆದ ಫೆಡರಲ್‌ ರಿಸರ್ವ್‌ ನಾಲ್ಕು ವರ್ಷದ ಬಳಿಕ ಶೇ 0.50ರಷ್ಟು ಬಡ್ಡಿದರ ಕಡಿತಗೊಳಿಸುವುದರಿಂದ ದೇಶದ ಷೇರುಪೇಟೆಯಲ್ಲಿ ಗುರುವಾರ ಸಕಾರಾತ್ಮಕ ವಹಿವಾಟು ನಡೆಯಿತು. 

ಮುಂಬೈ ಷೇರುಪೇಟೆ ಸೂಚ್ಯಂಕ 236 ಅಂಶ ಏರಿಕೆ ಕಂಡು 83,184 ಅಂಶಗಳಲ್ಲಿ ಸ್ಥಿರಗೊಂಡಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 38 ಅಂಶ ಏರಿಕೆ ಕಂಡು 25,415 ಅಂಶಗಳಲ್ಲಿ ವಹಿವಾಟನ್ನು ಮುಕ್ತಾಯಗೊಳಿಸಿತು. 

ಸೆನ್ಸೆಕ್ಸ್‌ ಗುಚ್ಛದಲ್ಲಿನ ಎನ್‌ಟಿಪಿಸಿ, ನೆಸ್ಲೆ, ಟೈಟನ್‌, ಕೋಟಕ್ ಮಹೀಂದ್ರ ಬ್ಯಾಂಕ್‌, ಮಾರುತಿ ಸುಜುಕಿ, ಎಚ್‌ಯುಎಲ್‌, ಭಾರ್ತಿ ಏರ್‌ಟೆಲ್‌, ಎಚ್‌ಡಿಎಫ್‌ಸಿ ಬ್ಯಾಂಕ್‌ನ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ.

ADVERTISEMENT

ಎಚ್‌ಸಿಎಲ್‌ ಟೆಕ್ನಾಲಜೀಸ್‌, ಟಿಸಿಎಸ್‌, ಅದಾನಿ ಪೋರ್ಟ್ಸ್‌, ಎಲ್‌ ಆ್ಯಂಡ್ ಟಿ, ಜೆಎಸ್‌ಡಬ್ಲ್ಯು ಸ್ಟೀಲ್‌, ಎಸ್‌ಬಿಐ, ಟೆಕ್‌ ಮಹೀಂದ್ರ ಮತ್ತು ಬಜಾಜ್‌ ಫೈನಾನ್ಸ್‌ ಷೇರುಗಳು ಕುಸಿತ ಕಂಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.