ಮುಂಬೈ: ಚಿಲ್ಲರೆ ಹಣದುಬ್ಬರದ ಏರಿಕೆಯಿಂದಾಗಿ ಬುಧವಾರ ನಡೆದ ವಹಿವಾಟಿನಲ್ಲಿ ಷೇರು ಸೂಚ್ಯಂಕಗಳು ಶೇ 1ರಷ್ಟು ಕುಸಿತ ಕಂಡಿವೆ. ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳವೂ ಇದಕ್ಕೆ ನೆರವಾಯಿತು.
ಎರಡು ದಿನದಲ್ಲಿ ಹೂಡಿಕೆದಾರರ ಸಂಪತ್ತು ₹13 ಲಕ್ಷ ಕೋಟಿ ಕರಗಿದೆ.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 984 ಅಂಶ ಇಳಿಕೆ ಕಂಡು, 77,690 ಅಂಶಗಳಲ್ಲಿ ಮುಕ್ತಾಯಗೊಂಡಿತು. ವಹಿವಾಟಿನ ಒಂದು ಸಂದರ್ಭದಲ್ಲಿ 1,141 ಅಂಶ ಇಳಿಕೆ ಕಂಡಿತ್ತು.
ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 324 ಅಂಶ ಇಳಿಕೆ ಕಂಡು 23,559 ಅಂಶಗಳಲ್ಲಿ ಸ್ಥಿರಗೊಂಡಿತು.
ಸೆನ್ಸೆಕ್ಸ್ ಗುಚ್ಛದಲ್ಲಿನ ಮಹೀಂದ್ರ ಆ್ಯಂಡ್ ಮಹೀಂದ್ರ, ಟಾಟಾ ಸ್ಟೀಲ್, ಅದಾನಿ ಪೋರ್ಟ್ಸ್, ಜೆಎಸ್‌ಡಬ್ಲ್ಯು ಸ್ಟೀಲ್, ಇಂಡಸ್ ಇಂಡ್ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರಿಸ್, ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಕೋಟಕ್ ಮಹೀಂದ್ರ ಬ್ಯಾಂಕ್‌ನ ಷೇರಿನ ಮೌಲ್ಯ ಇಳಿಕೆಯಾಗಿದೆ.
ಟಾಟಾ ಮೋಟರ್ಸ್, ಎನ್‌ಟಿಪಿಸಿ, ಹಿಂದುಸ್ಥಾನ್ ಯೂನಿಲಿವರ್, ಏಷ್ಯನ್ ಪೇಂಟ್ಸ್ ಮತ್ತು ಇನ್ಫೊಸಿಸ್ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.