ADVERTISEMENT

ಸೆನ್ಸೆಕ್ಸ್‌, ನಿಫ್ಟಿ ಶೇ 1ರಷ್ಟು ಕುಸಿತ

ಪಿಟಿಐ
Published 12 ನವೆಂಬರ್ 2024, 14:43 IST
Last Updated 12 ನವೆಂಬರ್ 2024, 14:43 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮುಂಬೈ: ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳದಿಂದಾಗಿ ಮಂಗಳವಾರ ದೇಶದ ಷೇರುಪೇಟೆಯಲ್ಲಿ ಕರಡಿ ಕುಣಿತ ಜೋರಾಗಿದ್ದು, ಸೂಚ್ಯಂಕಗಳು ಶೇ 1ರಷ್ಟು ಕುಸಿತ ಕಂಡಿವೆ. 

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್‌ 820 ಅಂಶ ಇಳಿಕೆ ಕಂಡು, 78,675 ಅಂಶಗಳಲ್ಲಿ ಸ್ಥಿರಗೊಂಡಿತು. ರಾಷ್ಟ್ರೀಯ ಷೇರು‍ಪೇಟೆ ಸೂಚ್ಯಂಕ ನಿಫ್ಟಿ 257 ಅಂಶ ಇಳಿಕೆ ಕಂಡು, 23,883 ಅಂಶಗಳಲ್ಲಿ ವಹಿವಾಟು ಮುಕ್ತಾಯಗೊಂಡಿತು. 

ಸೆನ್ಸೆಕ್ಸ್‌ ಗುಚ್ಛದಲ್ಲಿನ ಎನ್‌ಟಿಪಿಸಿ, ಏಷ್ಯನ್‌ ಪೇಂಟ್ಸ್‌, ಎಚ್‌ಡಿಎಫ್‌ಸಿ ಬ್ಯಾಂಕ್‌, ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ, ಟಾಟಾ ಮೋಟರ್ಸ್‌, ಜೆಎಸ್‌ಡಬ್ಲ್ಯು ಸ್ಟೀಲ್‌, ಮಾರುತಿ ಮತ್ತು ಪವರ್ ಗ್ರಿಡ್ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ. 

ADVERTISEMENT

ಸನ್‌ ಫಾರ್ಮಾ, ಇನ್ಫೊಸಿಸ್‌, ಐಸಿಐಸಿಐ ಬ್ಯಾಂಕ್‌ನ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ.

ಸೋಮವಾರದ ವಹಿವಾಟಿನಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ₹2,306 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ‌.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.