ADVERTISEMENT

ಷೇರು ಸೂಚ್ಯಂಕ ಶೇ 1ರಷ್ಟು ಕುಸಿತ: ಹೂಡಿಕೆದಾರರಿಗೆ ₹9.19 ಲಕ್ಷ ಕೋಟಿ ನಷ್ಟ

ಪಿಟಿಐ
Published 22 ಅಕ್ಟೋಬರ್ 2024, 15:23 IST
Last Updated 22 ಅಕ್ಟೋಬರ್ 2024, 15:23 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮುಂಬೈ: ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳದಿಂದಾಗಿ ಸತತ ಎರಡನೇ ದಿನವಾದ ಮಂಗಳವಾರವೂ ಷೇರು ಸೂಚ್ಯಂಕಗಳು ಶೇ 1ರಷ್ಟು ಕುಸಿತ ಕಂಡಿವೆ. 

ಹೂಡಿಕೆದಾರರ ಸಂಪತ್ತು ₹9.19 ಲಕ್ಷ ಕೋಟಿ ಕರಗಿದೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್‌ 930 ಅಂಶ ಕುಸಿತ (ಶೇ 1.15ರಷ್ಟು) ಕಂಡು 80,220 ಅಂಶಗಳಲ್ಲಿ ಅಂತ್ಯಗೊಂಡಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 309 ಅಂಶ ಇಳಿಕೆಯಾಗಿ (ಶೇ 1.25ರಷ್ಟು) 24,472 ಅಂಶಗಳಲ್ಲಿ ಸ್ಥಿರಗೊಂಡಿತು. 

ADVERTISEMENT

ಸೆನ್ಸೆಕ್ಸ್‌ ಗುಚ್ಛದಲ್ಲಿನ ಮಹೀಂದ್ರ ಆ್ಯಂಡ್‌ ಮಹೀಂದ್ರ, ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾ, ಪವರ್‌ ಗ್ರಿಡ್‌, ಟಾಟಾ ಸ್ಟೀಲ್‌, ಇಂಡಸ್‌ ಇಂಡ್‌ ಬ್ಯಾಂಕ್‌, ಟಾಟಾ ಮೋಟರ್ಸ್‌, ಎಲ್‌ ಆ್ಯಂಡ್‌ ಟಿ, ಬಜಾಜ್‌ ಫೈನಾನ್ಸ್‌, ರಿಲಯನ್ಸ್ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ. 

ಐಸಿಐಸಿಐ ಬ್ಯಾಂಕ್‌, ನೆಸ್ಲೆ ಇಂಡಿಯಾ ಮತ್ತು ಇನ್ಫೊಸಿಸ್‌ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ. 

ಸೋಮವಾರದ ವಹಿವಾಟಿನಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ₹2,261 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ. ದೇಶೀಯ ಸಾಂಸ್ಥಿಕ ಹೂಡಿಕೆದಾರರು ₹3,225 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ.

ಅಂತರರಾಷ್ಟ್ರೀಯಮಟ್ಟದಲ್ಲಿ ಬ್ರೆಂಟ್‌ ಕಚ್ಚಾ ತೈಲದ ಬೆಲೆಯು ಶೇ 0.61ರಷ್ಟು ಏರಿಕೆಯಾಗಿದ್ದು, ಪ್ರತಿ ಬ್ಯಾರೆಲ್‌ಗೆ 74.74 ಡಾಲರ್‌ ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.