ಮುಂಬೈ: ಐ.ಟಿ ಮತ್ತು ಬ್ಯಾಂಕಿಂಗ್ ವಲಯದ ಷೇರುಗಳ ಮಾರಾಟದ ಹೆಚ್ಚಳದಿಂದ ಷೇರು ಸೂಚ್ಯಂಕಗಳು ಸೋಮವಾರದ ವಹಿವಾಟಿನಲ್ಲಿ ಏರಿಕೆ ಕಂಡಿವೆ.
ಷೇರು ಸೂಚ್ಯಂಕಗಳ ಏರಿಕೆಯಿಂದ ಬಿಎಸ್‌ಇ ನೋಂದಾಯಿತ ಕಂಪನಿಗಳ ಮಾರುಕಟ್ಟೆ ಮೌಲ್ಯವು (ಎಂ–ಕ್ಯಾಪ್) ಒಂದೇ ದಿನ ₹1.35 ಲಕ್ಷ ಕೋಟಿ ವೃದ್ಧಿಯಾಗಿದೆ. ಕಂಪನಿಗಳ ಒಟ್ಟು ಎಂ–ಕ್ಯಾಪ್ ₹463 ಲಕ್ಷ ಕೋಟಿಗೆ ಏರಿಕೆಯಾಗಿದೆ.
ಮುಂಬೈ ಷೇರುಪೇಟೆ ಸೂಚ್ಯಂಕ (ಬಿಎಸ್‌ಇ) ಸೆನ್ಸೆಕ್ಸ್ 591 ಅಂಶ ಏರಿಕೆಯಾಗಿ, 81,973ಕ್ಕೆ ಅಂತ್ಯಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 163 ಅಂಶ ಹೆಚ್ಚಳವಾಗಿ 25,127ಕ್ಕೆ ಸ್ಥಿರಗೊಂಡಿದೆ.
ಟೆಕ್ ಮಹೀಂದ್ರ, ಎಚ್‌ಡಿಎಫ್‌ಸಿ ಬ್ಯಾಂಕ್, ಲಾರ್ಸೆನ್ ಆ್ಯಂಡ್ ಟೊಬ್ರೊ, ಐಟಿಸಿ, ಇನ್ಫೊಸಿಸ್, ಇಂಡಸ್‌ಇಂಡ್ ಬ್ಯಾಂಕ್, ಕೋಟಕ್ ಮಹೀಂದ್ರ ಬ್ಯಾಂಕ್, ಟೈಟನ್ ಮತ್ತು ಎಚ್‌ಸಿಎಲ್ ಟೆಕ್ನಾಲಜೀಸ್ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ.
ಮಾರುತಿ ಸುಜುಕಿ ಇಂಡಿಯಾ, ಟಾಟಾ ಸ್ಟೀಲ್, ಬಜಾಜ್ ಫೈನಾನ್ಸ್, ಅಲ್ಟ್ರಾಟೆಕ್ ಸಿಮೆಂಟ್, ನೆಸ್ಲೆ ಇಂಡಿಯಾ, ಎಕ್ಸಿಸ್ ಬ್ಯಾಂಕ್ ಮತ್ತು ಟಿಸಿಎಸ್ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಶೇ 2.52ರಷ್ಟು ಇಳಿಕೆಯಾಗಿದೆ. ಪ್ರತಿ ಬ್ಯಾರೆಲ್‌ಗೆ 77.05 ಡಾಲರ್‌ಗೆ (₹6,476) ತಲುಪಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.