ADVERTISEMENT

ಸೆನ್ಸೆಕ್ಸ್‌, ನಿಫ್ಟಿ ಸಾರ್ವಕಾಲಿಕ ಗರಿಷ್ಠ

ಪಿಟಿಐ
Published 25 ಸೆಪ್ಟೆಂಬರ್ 2024, 14:21 IST
Last Updated 25 ಸೆಪ್ಟೆಂಬರ್ 2024, 14:21 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮುಂಬೈ (ಪಿಟಿಐ): ಷೇರುಪೇಟೆಯಲ್ಲಿ ಬುಧವಾರ ನಡೆದ ವಹಿವಾಟಿನಲ್ಲಿ ಷೇರು ಸೂಚ್ಯಂಕಗಳಾದ ಸೆನ್ಸೆಕ್ಸ್‌ ಮತ್ತು ನಿಫ್ಟಿ ಗರಿಷ್ಠ ಮಟ್ಟಕ್ಕೆ ಜಿಗಿದಿವೆ. 

ಬ್ಯಾಂಕಿಂಗ್‌ ಮತ್ತು ಇಂಧನ ಷೇರುಗಳ ಖರೀದಿಯಲ್ಲಿನ ಹೆಚ್ಚಳವು ಸೂಚ್ಯಂಕಗಳ ಏರಿಕೆಗೆ ನೆರವಾಯಿತು. 

ಸೆನ್ಸೆಕ್ಸ್‌ 255 ಅಂಶ ಏರಿಕೆಯಾಗಿ, 85,169ಕ್ಕೆ ಸ್ಥಿರಗೊಂಡಿದೆ. ನಿಫ್ಟಿ 63 ಅಂಶ ಹೆಚ್ಚಳವಾಗಿ 26,004ಕ್ಕೆ ಅಂತ್ಯಗೊಂಡಿತು.

ADVERTISEMENT

ಪವರ್‌ ಗ್ರಿಡ್‌, ಎಕ್ಸಿಸ್‌ ಬ್ಯಾಂಕ್‌, ಎನ್‌ಟಿಪಿಸಿ, ಬಜಾಜ್‌ ಫಿನ್‌ಸರ್ವ್‌, ಬಜಾಜ್‌ ಫೈನಾನ್ಸ್‌, ಟಾಟಾ ಸ್ಟೀಲ್‌, ಮಹೀಂದ್ರ ಆ್ಯಂಡ್‌ ಮಹೀಂದ್ರ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್‌ನ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ.

ಟೆಕ್‌ ಮಹೀಂದ್ರ, ಟಾಟಾ ಮೋಟರ್ಸ್‌, ಟೈಟನ್‌, ಕೋಟಕ್‌ ಮಹೀಂದ್ರ ಬ್ಯಾಂಕ್‌, ಎಸ್‌ಬಿಐ ಮತ್ತು ಜೆಎಸ್‌ಡಬ್ಲ್ಯು ಸ್ಟೀಲ್‌ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.