ಮುಂಬೈ: ಐಸಿಐಸಿಐ ಬ್ಯಾಂಕ್, ಎಚ್‌ಯುಎಲ್ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್‌ಗಳ ಷೇರು ಖರೀದಿ ಹೆಚ್ಚಳದಿಂದ ನಾಲ್ಕು ವಹಿವಾಟಿನ ದಿನದ ಬಳಿಕ ಷೇರು ಸೂಚ್ಯಂಕಗಳು ಸೋಮವಾರ ಏರಿಕೆ ದಾಖಲಿಸಿವೆ.
ಮುಂಬೈ ಷೇರುಪೇಟೆ ಸೂಚ್ಯಂಕ (ಬಿಎಸ್‌ಇ) ಸೆನ್ಸೆಕ್ಸ್ 375 ಅಂಶ ಏರಿಕೆಯಾಗಿ, 81,559 ಅಂಶಕ್ಕೆ ಸ್ಥಿರಗೊಂಡಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 84 ಅಂಶ ಹೆಚ್ಚಳವಾಗಿ 24,963ಕ್ಕೆ ಸ್ಥಿರಗೊಂಡಿತು. ವಹಿವಾಟಿನ ವೇಳೆ ಇಳಿಕೆ ಕಂಡಿದ್ದ ಸೂಚ್ಯಂಕಗಳು, ನಂತರ ಚೇತರಿಸಿ ಕೊಂಡವು.
ಹಿಂದುಸ್ತಾನ್ ಯೂನಿಲಿವರ್, ಐಸಿಐಸಿಐ ಬ್ಯಾಂಕ್, ಐಟಿಸಿ, ಕೋಟಕ್ ಮಹೀಂದ್ರ ಬ್ಯಾಂಕ್, ಇಂಡಸ್‌ಇಂಡ್ ಬ್ಯಾಂಕ್, ಎಕ್ಸಿಸ್ ಬ್ಯಾಂಕ್, ಅಲ್ಟ್ರಾಟೆಕ್ ಸಿಮೆಂಟ್ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್‌ನ ಷೇರಿನ ಮೌಲ್ಯದಲ್ಲಿ ಏರಿಕೆ ದಾಖಲಿಸಿವೆ. ಟೆಕ್ ಮಹೀಂದ್ರ, ಟಾಟಾ ಸ್ಟೀಲ್, ಎನ್‌ಟಿಪಿಸಿ, ಟಾಟಾ ಮೋಟರ್ಸ್, ಪವರ್ ಗ್ರಿಡ್ ಮತ್ತು ಟೈಟನ್ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ.
ಏಷ್ಯನ್ ಮಾರುಕಟ್ಟೆಯಲ್ಲಿ ಸೋಲ್, ಟೋಕಿಯೊ ಮತ್ತು ಹಾಂಗ್‌ಕಾಂಗ್ ನಕಾರಾತ್ಮಕ ವಹಿವಾಟು ದಾಖಲಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.