ADVERTISEMENT

ದೆಹಲಿ: ಬೆಳ್ಳಿ ದರ ಸಾರ್ವಕಾಲಿಕ ಏರಿಕೆ

​ಪ್ರಜಾವಾಣಿ ವಾರ್ತೆ
Published 16 ಮೇ 2024, 14:40 IST
Last Updated 16 ಮೇ 2024, 14:40 IST
   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಪ್ರತಿ ಕೆ.ಜಿ ಬೆಳ್ಳಿ ಧಾರಣೆಯು ₹1,800 ಏರಿಕೆಯಾಗಿದ್ದು, ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿದೆ. ಗುರುವಾರ ಒಂದು ಕೆ.ಜಿ. ಬೆಳ್ಳಿಯು ₹88,700ಕ್ಕೆ ಮಾರಾಟವಾಯಿತು.

ಚಿನ್ನದ ದರ 10 ಗ್ರಾಂಗೆ ₹650 ಏರಿಕೆಯಾಗಿದ್ದು, ₹74,050ಕ್ಕೆ ಮುಟ್ಟಿದೆ.

‘ಕಳೆದ ಆರು ತಿಂಗಳ ಬಳಿಕ ಅಮೆರಿಕದ ಚಿಲ್ಲರೆ ಹಣದುಬ್ಬರವು ಏಪ್ರಿಲ್‌ನಲ್ಲಿ ಇಳಿಕೆಯಾಗಿದೆ. ಹಾಗಾಗಿ, ಸೆಪ್ಟೆಂಬರ್‌ನಲ್ಲಿ ನಡೆಯುವ ಫೆಡರಲ್‌ ರಿಸರ್ವ್‌ನ ಹಣಕಾಸು ನೀತಿ ಸಮಿತಿ ಸಭೆಯಲ್ಲಿ ಬಡ್ಡಿದರ ಕಡಿತಗೊಳಿಸುವ ಸಾಧ್ಯತೆಯಿದೆ. ಹಾಗಾಗಿ, ಸತತ ಎರಡು ದಿನಗಳಿಂದಲೂ ಚಿನ್ನ ಹಾಗೂ ಬೆಳ್ಳಿ ದರವು ಏರಿಕೆಯ ಹಾದಿಯಲ್ಲಿ ಸಾಗಿದೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ADVERTISEMENT

‘ಅಮೆರಿಕದ ಕಾರ್ಮಿಕ ಇಲಾಖೆಯು ಬಿಡುಗಡೆಗೊಳಿಸಿರುವ ಹಣದುಬ್ಬರದ ವರದಿ ಅನ್ವಯ ಏಪ್ರಿಲ್‌ನಲ್ಲಿ ಡಾಲರ್‌ ಇಂಡೆಕ್ಸ್‌ ಐದು ವಾರಗಳ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಬಾಂಡ್‌ ಗಳಿಕೆಯು ಇಳಿಕೆಯಾಗಿದೆ. ಹಾಗಾಗಿ, ಹೂಡಿಕೆದಾರರು ಸುರಕ್ಷಿತ ಹೂಡಿಕೆಯಾದ ಹಳದಿ ಲೋಹದತ್ತ ದೃಷ್ಟಿ ನೆಟ್ಟಿದ್ದಾರೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ಸೌಮಿಲ್‌ ಗಾಂಧಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.