ಬೆಂಗಳೂರು: ಮುದ್ರಾ ಯೋಜನೆಯಡಿ ಸಾಲ ಮಂಜೂರು ಮತ್ತು ವಿತರಣೆಯಲ್ಲಿ ಕರ್ನಾಟಕವು ದೇಶದಲ್ಲಿಯೇ ಮೂರನೇ ಸ್ಥಾನದಲ್ಲಿದೆ. ಪಿಎಂ ಸ್ವಾನಿಧಿ ಯೋಜನೆಯ ವಿಷಯದಲ್ಲಿ 5ನೇ ಸ್ಥಾನ ಪಡೆದುಕೊಂಡಿದೆ ಎಂದು ರಾಜ್ಯ ಮಟ್ಟದ ಬ್ಯಾಂಕರುಗಳ ಸಮಿತಿಯ (ಎಸ್‌ಎಲ್‌ಬಿಸಿ) ಸಂಚಾಲಕ ಮತ್ತು ಕೆನರಾ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಎಂ. ಭಾಸ್ಕರ್ ಚಕ್ರವರ್ತಿ ಅವರು ಹೇಳಿದ್ದಾರೆ.
ಎಸ್‌ಎಲ್‌ಬಿಸಿ 2023ರ ಸೆಪ್ಟೆಂಬರ್ ತ್ರೈಮಾಸಿಕದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ.
ಸಭೆಯ ಅಧ್ಯಕ್ಷತೆ ವಹಿಸಿದ್ದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಬರದಿಂದ (ನೈಸರ್ಗಿಕ ವಿಕೋಪ) ತೊಂದರೆಗೆ ಒಳಗಾಗಿರುವ ಎಲ್ಲ ರೈತರಿಗೂ ಪರಿಹಾರ ಕ್ರಮಗಳು ತಲುಪಬೇಕು. ಬ್ಯಾಂಕ್‌ಗಳು ಜಾಗೃತಿ ಶಿಬಿರಗಳನ್ನು ಆಯೋಜಿಸಬೇಕು ಮತ್ತು ನಿಗದಿತ ಕಟ್ಆಫ್ ದಿನಾಂಕದೊಳಗೆ ಎಲ್ಲಾ ಅರ್ಹ ಸಾಲಗಳನ್ನು ಮರುಹೊಂದಿಸಬೇಕು ಎಂದು ಸಲಹೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.