ADVERTISEMENT

‘ಎಎಎಐ’ಗೆ ಶ್ರೀನಿವಾಸ್ ಆಯ್ಕೆ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2022, 13:22 IST
Last Updated 30 ನವೆಂಬರ್ 2022, 13:22 IST
ಕೆ. ಶ್ರೀನಿವಾಸ್
ಕೆ. ಶ್ರೀನಿವಾಸ್   

ಬೆಂಗಳೂರು: ಶ್ಲೋಕ ಅಡ್ವರ್ಟೈಸಿಂಗ್ ಪ್ರೈ.ಲಿ. ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಇಒ) ಕೆ. ಶ್ರೀನಿವಾಸ್ ಅವರು ಭಾರತೀಯ ಜಾಹೀರಾತು ಏಜೆನ್ಸಿಗಳ ಒಕ್ಕೂಟದ (ಎಎಎಐ) ಆಡಳಿತ ಮಂಡಳಿಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಶ್ರೀನಿವಾಸ್ ಅವರಿಗೆ ಜಾಹೀರಾತು ಹಾಗೂ ಮಾರುಕಟ್ಟೆ ಕ್ಷೇತ್ರದಲ್ಲಿ ಮೂವತ್ತು ವರ್ಷಗಳಿಗೂ ಹೆಚ್ಚಿನ ಅನುಭವ ಇದೆ. ಶ್ಲೋಕಾ ಅಡ್ವರ್ಟೈಸಿಂಗ್ ಕಂಪನಿಯ ಬೆಳವಣಿಗೆಯಲ್ಲಿ ಶ್ರೀನಿವಾಸ್ ಅವರ ಪಾತ್ರ ಮಹತ್ವದ್ದು ಎಂದು ಪ್ರಕಟಣೆ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT