ADVERTISEMENT

ಜಿಎಸ್‌ಟಿ ಪರಿಹಾರ ಇನ್ನೈದು ವರ್ಷ ವಿಸ್ತರಿಸಲು ಕೇಂದ್ರದ ಬಳಿ ರಾಜ್ಯಗಳ ಬೇಡಿಕೆ

ಬಜೆಟ್‌ ಪೂರ್ವ ಸಭೆ: ಕೇಂದ್ರ ಸರ್ಕಾರಕ್ಕೆ ರಾಜ್ಯಗಳ ಬೇಡಿಕೆ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2021, 19:02 IST
Last Updated 30 ಡಿಸೆಂಬರ್ 2021, 19:02 IST
   

ನವದೆಹಲಿ: ಜಿಎಸ್‌ಟಿ ಪರಿಹಾರವನ್ನು ಇನ್ನೂ ಐದು ವರ್ಷಗಳವರೆಗೆ ವಿಸ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಹಲವು ರಾಜ್ಯಗಳು ಬೇಡಿಕೆ ಇಟ್ಟಿವೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ರಾಜ್ಯಗಳ ಹಣಕಾಸು ಸಚಿವರ ಜೊತೆ ಗುರುವಾರ ಬಜೆಟ್‌ ಪೂರ್ವ ಸಭೆ ನಡೆಸಿದರು. ಕೋವಿಡ್‌ ಸಾಂಕ್ರಾಮಿಕದಿಂದಾಗಿ ರಾಜ್ಯಗಳಿಗೆ ವರಮಾನ ನಷ್ಟ ಉಂಟಾಗಿದೆ. ಹೀಗಾಗಿ ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ ಕೇಂದ್ರ ಸರ್ಕಾರದ ಪಾಲು ಹೆಚ್ಚಿಸುವಂತೆ ಸಚಿವೆ ನಿರ್ಮಲಾ ಅವರನ್ನು ರಾಜ್ಯಗಳು ಒತ್ತಾಯಿಸಿವೆ.

ಜಿಎಸ್‌ಟಿ ಜಾರಿಗೊಳಿಸುವುದರಿಂದ ರಾಜ್ಯಗಳಿಗೆ ಆಗುವ ವರಮಾನ ಕೊರತೆ ತುಂಬಿಕೊಡುವ ಪರಿಹಾರ ವ್ಯವಸ್ಥೆಯು 2022ರ ಜೂನ್‌ಗೆ ಅಂತ್ಯವಾಗಲಿದೆ.

ADVERTISEMENT

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತ

ನವದೆಹಲಿ (ಪಿಟಿಐ): ಜಿಎಸ್‌ಟಿ ಪರಿಹಾರವನ್ನು ಇನ್ನೂ ಐದು ವರ್ಷಗಳವರೆಗೆ ವಿಸ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಹಲವು ರಾಜ್ಯಗಳು ಬೇಡಿಕೆ ಇಟ್ಟಿವೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ರಾಜ್ಯಗಳ ಹಣಕಾಸು ಸಚಿವರ ಜೊತೆ ಗುರುವಾರ ಬಜೆಟ್‌ ಪೂರ್ವಸಭೆ ನಡೆಸಿದರು. ಕೋವಿಡ್‌ ಸಾಂಕ್ರಾಮಿಕದಿಂದಾಗಿ ರಾಜ್ಯಗಳಿಗೆ ವರಮಾನ ನಷ್ಟ ಉಂಟಾಗಿದೆ. ಹೀಗಾಗಿ ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ ಕೇಂದ್ರ ಸರ್ಕಾರದ ಪಾಲು ಹೆಚ್ಚಿಸುವಂತೆ ಸಚಿವೆ ನಿರ್ಮಲಾ ಅವರನ್ನು ರಾಜ್ಯಗಳು ಒತ್ತಾಯಿಸಿವೆ.

ಜಿಎಸ್‌ಟಿ ಜಾರಿಗೊಳಿಸುವುದರಿಂದ ರಾಜ್ಯಗಳಿಗೆ ಆಗುವ ವರಮಾನ ಕೊರತೆ ತುಂಬಿಕೊಡುವ ಪರಿಹಾರ ವ್ಯವಸ್ಥೆಯು 2022ರ ಜೂನ್‌ಗೆ ಅಂತ್ಯವಾಗಲಿದೆ.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದದೆಹಲಿ ಉಪಮುಖ್ಯಮಂತ್ರಿ ಮನಿಶ್‌ ಸಿಸೋಡಿಯಾ, ‘ಜಿಎಸ್‌ಟಿ ಪರಿಹಾರವನ್ನು ವಿಸ್ತರಿಸದೇ ಇದ್ದರೆ ಹಲವು ರಾಜ್ಯಗಳ ಆರ್ಥಿಕ ಸ್ಥಿತಿಯು ಹದಗೆಡಲಿದೆ’ ಎಂದರು.

ಕೋವಿಡ್‌ ಸಾಂಕ್ರಾಮಿಕದಿಂದಾಗಿ ರಾಜ್ಯದ ವರಮಾನ ಇಳಿಕೆ ಆಗಿದ್ದು, ವೆಚ್ಚವು ಹೆಚ್ಚಾಗುತ್ತಿದೆ. ಹೀಗಾಗಿ 2022–23ನೇ ಹಣಕಾಸು ವರ್ಷದಲ್ಲಿ ಯಾವುದೇ ಷರತ್ತು ಇಲ್ಲದೇ ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ (ಎಸ್‌ಜಿಡಿಪಿ) ಶೇ 5ರಷ್ಟು ಮಾರುಕಟ್ಟೆ ಯಿಂದ ಸಾಲ ಪಡೆಯಲು ಅನುಮತಿ ನೀಡುವಂತೆ ತಮಿಳುನಾಡು ಸರ್ಕಾರವು ಬೇಡಿಕೆ ಇಟ್ಟಿದೆ.

ಪೆಟ್ರೋಲ್‌, ಡೀಸೆಲ್‌ ಮೇಲಿನ ಸೆಸ್‌ ತಗ್ಗಿಸಿ: ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಎಕ್ಸೈಸ್‌ ಸುಂಕ ತಗ್ಗಿಸುವ ಬದಲಾಗಿ ಸೆಸ್‌ ಅನ್ನು ಕಡಿಮೆ ಮಾಡುವಂತೆ ಛತ್ತೀಸಗಡದ ಮುಖ್ಯಮಂತ್ರಿ ಭೂಪೇಷ್ ಬಘೆಲ್ ಅವರು ಒತ್ತಾಯಿಸಿದ್ದಾರೆ. ಎಕ್ಸೈಸ್‌ ಸುಂಕ ತಗ್ಗಿಸುವುದರಿಂದ ರಾಜ್ಯಗಳ ತೆರಿಗೆ ಪಾಲು ಕಡಿಮೆ ಆಗಲಿದೆ. ವ್ಯಾಟ್‌ ಸಂಗ್ರಹವು ಇಳಿಕೆ ಕಾಣಲಿದೆ ಎಂದು ಹೇಳಿದ್ದಾರೆ.

ನಾಡಿದದೆಹಲಿ ಉಪಮುಖ್ಯಮಂತ್ರಿ ಮನಿಶ್‌ ಸಿಸೋಡಿಯಾ, ‘ಜಿಎಸ್‌ಟಿ ಪರಿಹಾರವನ್ನು ವಿಸ್ತರಿಸದೇ ಇದ್ದರೆ ಹಲವು ರಾಜ್ಯಗಳ ಆರ್ಥಿಕ ಸ್ಥಿತಿಯು ಹದಗೆಡಲಿದೆ’ ಎಂದರು.

ಕೋವಿಡ್‌ ಸಾಂಕ್ರಾಮಿಕದಿಂದಾಗಿ ರಾಜ್ಯದ ವರಮಾನ ಇಳಿಕೆ ಆಗಿದ್ದು, ವೆಚ್ಚವು ಹೆಚ್ಚಾಗುತ್ತಿದೆ. ಹೀಗಾಗಿ 2022–23ನೇ ಹಣಕಾಸು ವರ್ಷದಲ್ಲಿ ಯಾವುದೇ ಷರತ್ತು ಇಲ್ಲದೇ ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ (ಎಸ್‌ಜಿಡಿಪಿ) ಶೇ 5ರಷ್ಟು ಮಾರುಕಟ್ಟೆಯಿಂದ ಸಾಲ ಪಡೆಯಲು ಅನುಮತಿ ನೀಡುವಂತೆ ತಮಿಳುನಾಡು ಸರ್ಕಾರವು ಬೇಡಿಕೆ ಇಟ್ಟಿದೆ.

ಜವಳಿ, ಪಾದರಕ್ಷೆ ಮೇಲಿನ ತೆರಿಗೆ ಹೆಚ್ಚಳಕ್ಕೆ ವಿರೋಧ: ಜವಳಿ, ಪಾದರಕ್ಷೆ ಮೇಲಿನ ಜಿಎಸ್‌ಟಿಯನ್ನು ಶೇ 5 ರಿಂದ ಶೇ 12ಕ್ಕೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಹಲವು ರಾಜ್ಯಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಜಿಎಸ್‌ಟಿ ಮಂಡಳಿಯು ಶುಕ್ರವಾರ ಸಭೆ ನಡೆಸಲಿದ್ದು, ಸರ್ಕಾರಿ ಮೂಲಗಳ ಪ್ರಕಾರ, ಜಿಎಸ್‌ಟಿ ಹೆಚ್ಚಳವನ್ನು ಕೈಬಿಡುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.