ನವದೆಹಲಿ: ‘ರೈತರ ಉತ್ಪನ್ನಗಳಿಗೆ ಉತ್ತಮ ಬೆಲೆ ದೊರೆಯುವಂತೆ ಮಾಡಲು ಆನ್‌ಲೈನ್ ಆಧಾರಿತ ರಾಷ್ಟ್ರೀಯ ಕೃಷಿ ಮಾರುಕಟ್ಟೆ (ಇ–ನಾಮ್) ಬಳಸುವಂತೆ ರಾಜ್ಯಗಳ ಮನವೊಲಿಸಲಾಗುವುದು’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಎಪಿಎಂಸಿಗಳು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿವೆ. ರೈತರ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗುವಂತೆ ಮಾಡುವ ಸಾಮರ್ಥ್ಯವನ್ನು ಹೊಂದಿಲ್ಲ. ಹೀಗಾಗಿ ಅದನ್ನು ಕೈಬಿಟ್ಟು ಇ–ನಾಮ್ ಬಳಸುವಂತೆ ರಾಜ್ಯಗಳ ಜತೆ ಮಾತುಕತೆ ನಡೆಸಲಾಗುತ್ತಿದೆ’ ಎಂದು ಅವರು ಮಂಗಳವಾರ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.