ನವದೆಹಲಿ: ವಿಶೇಷ ನಗದು ಯೋಜನೆಯಡಿ ₹ 14 ಸಾವಿರ ಕೋಟಿ ನೀಡುವಂತೆ ಬ್ಯಾಂಕೇತರ ಹಣಕಾಸು ಸಂಸ್ಥೆಗಳು (ಎನ್‌ಬಿಎಫ್‌ಸಿ) ಮತ್ತು ಗೃಹ ಹಣಕಾಸು ಕಂಪನಿಗಳು (ಎಚ್‌ಎಫ್‌ಸಿ) ಮನವಿ ಮಾಡಿವೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.
ಕೋವಿಡ್–19 ಬಿಕ್ಕಟ್ಟಿನ ಸಂದರ್ಭದಲ್ಲಿ ಸಣ್ಣ ಹಣಕಾಸು ಸಂಸ್ಥೆಗಳಿಗೆ ನೆರವಾಗಲು ₹ 30 ಸಾವಿರ ಕೋಟಿ ಮೊತ್ತದ ವಿಶೇಷ ನಗದು ಯೋಜನೆ ಜಾರಿಗೊಳಿಸಲಾಗಿದೆ.
ಜುಲೈ 23ರವರೆಗೆ 5 ಅರ್ಜಿಗಳು ಬಂದಿದ್ದು, ₹ 3,090 ಕೋಟಿ ಮೊತ್ತವನ್ನು ಮಂಜೂರು ಮಾಡಲಾಗಿದೆ. ಇನ್ನೂ ₹ 13,776 ಕೋಟಿ ನೀಡುವಂತೆ ಒಟ್ಟಾರೆ 35 ಅರ್ಜಿಗಳು ಬಂದಿವೆ ಎಂದು ಸಚಿವಾಲಯ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.