ಬೆಂಗಳೂರು: ಸಿಂಡಿಕೇಟ್ ಬ್ಯಾಂಕ್, ಡಿಸೆಂಬರ್ ತ್ರೈಮಾಸಿಕದಲ್ಲಿ ₹ 435 ಕೋಟಿ ನಿವ್ವಳ ಲಾಭ ಗಳಿಸಿದೆ.
‘ವರ್ಷದ ಹಿಂದಿನ ಇದೇ ಅವಧಿಯಲ್ಲಿ ಬ್ಯಾಂಕ್‌ನ ನಿವ್ವಳ ಲಾಭವು ₹ 108 ಕೋಟಿಗಳಷ್ಟಿತ್ತು. ವಸೂಲಾಗದ ಸಾಲದ ಪ್ರಮಾಣವು (ಎನ್‌ಪಿಎ) ಕಡಿಮೆಯಾಗಿರುವುದರಿಂದ ನಿವ್ವಳ ಲಾಭದಲ್ಲಿ ಹೆಚ್ಚಳ ಸಾಧ್ಯವಾಗಿದೆ’ ಎಂದು ಬ್ಯಾಂಕ್‌ನ ಸಿಇಒ ಮೃತ್ಯುಂಜಯ ಮಹಾಪಾತ್ರ ಹೇಳಿದ್ದಾರೆ.
ಈ ಅವಧಿಯಲ್ಲಿನ ಬ್ಯಾಂಕ್‌ನ ಒಟ್ಟಾರೆ ವರಮಾನವು ವರ್ಷದ ಹಿಂದಿನ ₹ 6,077 ಕೋಟಿಗೆ ಹೋಲಿಸಿದರೆ ₹ 6,316 ಕೋಟಿಗೆ ಏರಿಕೆಯಾಗಿದೆ. ನಿವ್ವಳ ‘ಎನ್‌ಪಿಎ’ ಶೇ 6.75 ರಿಂದ ಶೇ 5.94ಕ್ಕೆ ಇಳಿದಿದೆ. ಭವಿಷ್ಯದ ವೆಚ್ಚಗಳಿಗಾಗಿ ಬ್ಯಾಂಕ್ ₹ 1,044 ಕೋಟಿ ತೆಗೆದು ಇರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.