ADVERTISEMENT

ಸಿಂಡಿಕೇಟ್ ಬ್ಯಾಂಕ್‌ ಸೇವೆ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2019, 20:00 IST
Last Updated 13 ಸೆಪ್ಟೆಂಬರ್ 2019, 20:00 IST

ಮಂಗಳೂರು: ಸಿಂಡಿಕೇಟ್ ಬ್ಯಾಂಕ್‌ನ ಕೋರ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಮೇಲ್ದರ್ಜೆಗೇರಿಸುವ ಪ್ರಕ್ರಿಯೆ ಕೈಗೆತ್ತಿಕೊಳ್ಳಲಾಗಿದೆ. ಇದರಿಂದಾಗಿ13ರ ರಾತ್ರಿ 10 ಗಂಟೆಯಿಂದ 15ರ ರಾತ್ರಿ 10 ಗಂಟೆಯವರೆಗೆ ಬ್ಯಾಂಕ್‌ನ ಎಟಿಎಂ, ಪಿಒಎಸ್, ಇಂಟರ್‌ನೆಟ್, ಮೊಬೈಲ್ ಬ್ಯಾಂಕಿಂಗ್, ಐಎಂಪಿಎಸ್ ಮತ್ತು ಯುಪಿಐ ಸೇವೆಗಳು ವ್ಯತ್ಯಯವಾಗಲಿವೆ.

ಇದು ಇಡೀ ರಾಜ್ಯಕ್ಕೆ ಅನ್ವಯಿಸುತ್ತದೆ. ಗ್ರಾಹಕರು ಸಹಕರಿಸಬೇಕು ಎಂದು ಸಿಂಡಿಕೇಟ್‌ ಬ್ಯಾಂಕ್ ಮಣಿಪಾಲ ವಲಯ ಕಚೇರಿಯ ಮ್ಯಾನೇಜರ್‌ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT