ನವದೆಹಲಿ: ‘ಟಾಟಾ ಸಮೂಹವು ದೇಶದ ತಯಾರಿಕಾ ವಲಯದಲ್ಲಿ ಮುಂದಿನ ಐದು ವರ್ಷದಲ್ಲಿ 5 ಲಕ್ಷ ಉದ್ಯೋಗಗಳನ್ನುಸೃಷ್ಟಿಸಲಿದೆ’ ಎಂದು ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರನ್ ತಿಳಿಸಿದ್ದಾರೆ.
ಇಂಡಿಯನ್ ಫೌಂಡೇಶನ್ ಫಾರ್ ಕ್ವಾಲಿಟಿ ಮ್ಯಾನೇಜ್‌ಮೆಂಟ್‌ನಿಂದ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಯಾರಿಕಾ ವಲಯದಲ್ಲಿ ಹೊಸದಾಗಿ ಉದ್ಯೋಗಗಳನ್ನು ಸೃಷ್ಟಿಸದ ಹೊರತು ವಿಕಸಿತ ಭಾರತದ ಆಶಯ ಈಡೇರಿಕೆಯು ಕಷ್ಟಸಾಧ್ಯ’ ಎಂದರು.
ಟಾಟಾ ಸಮೂಹವು ಸೆಮಿಕಂಡಕ್ಟರ್‌ನ ತಯಾರಿಕೆ ಮತ್ತು ಜೋಡಣೆ, ವಿದ್ಯುತ್‌ಚಾಲಿತ ವಾಹನಗಳು, ಬ್ಯಾಟರಿಗಳು ಮತ್ತು ಅದಕ್ಕೆ ಸಂಬಂಧಿತ ಕೈಗಾರಿಕೆಗಳಲ್ಲಿ ಹೆಚ್ಚಿನ ಹೂಡಿಕೆ ಮಾಡಲಿದೆ. ಇದರಿಂದ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಹೇಳಿದರು.
ಪ್ರತಿ ತಿಂಗಳು 10 ಲಕ್ಷ ಜನರು ಹೊಸ ಉದ್ಯೋಗಗಳಿಗೆ ಸೇರ್ಪಡೆಯಾಗುತ್ತಿದ್ದಾರೆ. ಹಾಗಾಗಿ, ನಾವು 10 ಕೋಟಿ ಉದ್ಯೋಗಗಳನ್ನು ಸೃಷ್ಟಿಸುವ ಅಗತ್ಯವಿದೆ. ಪ್ರತಿ ಉದ್ಯೋಗವು ಪರೋಕ್ಷವಾಗಿ 8ರಿಂದ 10 ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.