ಮುಂಬೈ : 2023–24ನೇ ಹಣಕಾಸು ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ಟಾಟಾ ಮೋಟರ್ಸ್ ಲಿಮಿಟೆಡ್ ₹7,100 ಕೋಟಿ ನಿವ್ವಳ ಲಾಭ ಗಳಿಸಿದೆ.
2022–23ರ ಮೂರನೇ ತ್ರೈಮಾಸಿಕದಲ್ಲಿ ₹3,043 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಶೇ 133ರಷ್ಟು ಹೆಚ್ಚಳವಾಗಿದೆ. ಸಂಚಿತ ವರಮಾನವು ಶೇ 25ರಷ್ಟು ಏರಿಕೆ ಆಗಿದ್ದು, ಒಟ್ಟು ₹1.10 ಲಕ್ಷ ಕೋಟಿಗೆ ತಲುಪಿದೆ. ನಿವ್ವಳ ಸಾಲವು ₹9,500 ಕೋಟಿಗೆ ಇಳಿದಿದೆ ಎಂದು ಕಂಪನಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.