ನವದೆಹಲಿ: 2024–25ನೇ ಆರ್ಥಿಕ ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ವಾಹನ ತಯಾರಿಕಾ ಕಂಪನಿ ಟಾಟಾ ಮೋಟರ್ಸ್ನ ನಿವ್ವಳ ಲಾಭದಲ್ಲಿ ಶೇ 10ರಷ್ಟು ಇಳಿಕೆಯಾಗಿದೆ.
ಹಿಂದಿನ ಹಣಕಾಸು ವರ್ಷದ ಇದೇ ತ್ರೈಮಾಸಿಕದಲ್ಲಿ ₹3,832 ಕೋಟಿ ಲಾಭ ಗಳಿಸಿತ್ತು. ಈ ಬಾರಿ ₹3,450 ಕೋಟಿ ಗಳಿಸಲಾಗಿದೆ ಎಂದು ಕಂಪನಿಯು ಷೇರುಪೇಟೆಗೆ ಶುಕ್ರವಾರ ತಿಳಿಸಿದೆ.
ಕಳೆದ ಹಣಕಾಸು ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹1.04 ಲಕ್ಷ ಕೋಟಿ ವರಮಾನ ಗಳಿಸಲಾಗಿತ್ತು. ಈ ಬಾರಿ ₹1 ಲಕ್ಷ ಕೋಟಿ ಗಳಿಸಲಾಗಿದೆ. ಒಟ್ಟು ವೆಚ್ಚ ₹97,330 ಕೋಟಿ ಆಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.