ನವದೆಹಲಿ: ಬೆಂಗಳೂರು ಸೇರಿದಂತೆ ದೇಶದ ವಿವಿಧೆಡೆ 500ಕ್ಕೂ ಹೆಚ್ಚು ಸ್ಥಳಗಳಲ್ಲಿ ಅತಿವೇಗದ ಇ.ವಿ. ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ಜತೆಗೆ ಟಾಟಾ ಪವರ್‌ನ ಅಂಗಸಂಸ್ಥೆಯಾದ ಟಾಟಾ ಪವರ್ ಇ.ವಿ ಚಾರ್ಜಿಂಗ್ ಸಲ್ಯೂಷನ್ಸ್ ಒಪ್ಪಂದ ಮಾಡಿಕೊಂಡಿದೆ.
ಐಒಸಿಎಲ್‌ನ ಮಳಿಗೆಗಳ ಬಳಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಟಾಟಾ ಪವರ್ ಸೋಮವಾರ ತಿಳಿಸಿದೆ.
ದೇಶದ ಪ್ರಮುಖ ನಗರಗಳಾದ ಮುಂಬೈ, ದೆಹಲಿ, ಕೋಲ್ಕತ್ತ, ಬೆಂಗಳೂರು, ಅಹಮದಾಬಾದ್, ಪುಣೆ ಮತ್ತು ಕೊಚ್ಚಿ ಸೇರಿದಂತೆ ಪ್ರಮುಖ ಹೆದ್ದಾರಿಗಳಾದ ಮುಂಬೈ–ಪುಣೆ ಎಕ್ಸ್‌ಪ್ರೆಸ್ ವೇ, ಸೇಲಂ–ಕೊಚ್ಚಿ ಹೆದ್ದಾರಿ, ಗುಂಟೂರು–ಚೆನ್ನೈ ಹೆದ್ದಾರಿ ಮತ್ತು ಗೋಲ್ಡನ್ ಕ್ವಾರ್ಡಿಲ್ಯಾಟರಲ್ ಬಳಿ ಇ.ವಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ವಿವರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.