ನವದೆಹಲಿ: ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರಕ್ಕೆ ತೆರಿಗೆ ಹಂಚಿಕೆಯ ನವೆಂಬರ್ ಕಂತಿನ ರೂಪದಲ್ಲಿ ₹2,660 ಕೋಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಕೇಂದ್ರವು 28 ರಾಜ್ಯಗಳಿಗೆ ಒಟ್ಟು 72,961 ಕೋಟಿ ಬಿಡುಗಡೆಗೊಳಿಸಿದೆ.
15ನೇ ಹಣಕಾಸು ಆಯೋಗದ ಶಿಫಾರಸಿನ ಪ್ರಕಾರ, ಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರ ಸಂಗ್ರಹಿಸುವ ತೆರಿಗೆಯಲ್ಲಿ ಶೇ 41 ಮೊತ್ತವನ್ನು ರಾಜ್ಯ ಸರ್ಕಾರಗಳಿಗೆ 14 ಕಂತುಗಳಲ್ಲಿ ಹಂಚಿಕೆ ಮಾಡಲಾಗುತ್ತದೆ.
2023–24ರ ಬಜೆಟ್ ಪ್ರಕಾರ, ಕೇಂದ್ರ ಸರ್ಕಾರವು ಈ ವರ್ಷವು ರಾಜ್ಯಗಳಿಗೆ ₹10.21 ಲಕ್ಷ ಕೋಟಿ ವರ್ಗಾಯಿಸುವ ನಿರೀಕ್ಷೆ ಇದೆ. ಹಾಗಾಗಿ, ಪ್ರತಿ ಕಂತಿನ ಸರಾಸರಿ ಮೊತ್ತ ₹72.916 ಕೋಟಿ ಆಗಲಿದೆ. ಕೇಂದ್ರದ ಆದಾಯವು ಸುಧಾರಿಸಿದಂತೆ ಕಂತಿನ ಮೊತ್ತ ಸಹ ಹೆಚ್ಚಾಗಲಿದೆ.
ಮುಂಬರುವ ಹಬ್ಬದ ಋತುವಿನ ದೃಷ್ಟಿಯಿಂದ ನವೆಂಬರ್ 10ರ ಬದಲು ನವೆಂಬರ್ 7ರಂದೇ ಹಣ ಬಿಡುಗಡೆ ಮಾಡಲಾಗಿದೆ ಎಂದು ಹಣಕಾಸು ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.