ADVERTISEMENT

ಟಿಸಿಎಸ್‌ಗೆ ₹12,434 ಕೋಟಿ ನಿವ್ವಳ ಲಾಭ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2024, 15:23 IST
Last Updated 12 ಏಪ್ರಿಲ್ 2024, 15:23 IST
   

ಮುಂಬೈ: ಸಾಫ್ಟ್‌ವೇರ್ ಸೇವೆ ಒದಗಿಸುವ ದೇಶದ ಅತಿದೊಡ್ಡ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌ (ಟಿಸಿಎಸ್‌), 2023–24ನೇ ಆರ್ಥಿಕ ವರ್ಷದ ಮಾರ್ಚ್‌ ತ್ರೈಮಾಸಿಕದಲ್ಲಿ ₹12,434 ಕೋಟಿ ನಿವ್ವಳ ಲಾಭಗಳಿಸಿದೆ. 

ಕಳೆದ ಹಣಕಾಸು ವರ್ಷದ ಮಾರ್ಚ್‌ ತ್ರೈಮಾಸಿಕದಲ್ಲಿ ₹11,392 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಲಾಭದಲ್ಲಿ ಶೇ 9.1ರಷ್ಟು ಏರಿಕೆಯಾಗಿದೆ. 

2023–24ನೇ ಹಣಕಾಸು ವರ್ಷದಲ್ಲಿ ಕಂಪನಿಯ ನಿವ್ವಳ ಲಾಭದಲ್ಲಿ ಶೇ 9ರಷ್ಟು ಏರಿಕೆಯಾಗಿದ್ದು, ₹45,908 ಕೋಟಿಗೆ ಮುಟ್ಟಿದೆ. ಮಾರ್ಚ್‌ ತ್ರೈಮಾಸಿಕದಲ್ಲಿ ಕಂಪನಿಯ ವರಮಾನವು ಶೇ 3.5ರಷ್ಟು ಏರಿಕೆಯಾಗಿದ್ದು, ₹61,237 ಕೋಟಿ ಆಗಿದೆ ಎಂದು ಷೇರುಪೇಟೆಗೆ ತಿಳಿಸಿದೆ.

ADVERTISEMENT

ನಾಲ್ಕನೇ ತ್ರೈಮಾಸಿಕದಲ್ಲಿ ಎರಡು ಸಾವಿರ ಸಿಬ್ಬಂದಿಯು ಕಂಪನಿಯನ್ನು ತೊರೆದಿದ್ದು, ಒಟ್ಟು ಸಿಬ್ಬಂದಿಯ ಸಂಖ್ಯೆ 6.01 ಲಕ್ಷ ಆಗಿದೆ ಎಂದು ತಿಳಿಸಿದೆ.

‘ಜಾಗತಿಕ ಮಟ್ಟದಲ್ಲಿನ ಅನಿಶ್ಚಿತತೆ ನಡುವೆಯೂ ಗ್ರಾಹಕರ ಪ್ರಮುಖ ಆದ್ಯತೆಗಳಿಗೆ ಅನುಗುಣವಾಗಿ ಸೇವೆ ಒದಗಿಸುವಲ್ಲಿ ಕಂಪನಿಯ ಯಶಸ್ವಿಯಾಗಿದೆ’ ಎಂದು ಕಂಪನಿಯ ಸಿಇಒ ಕೆ. ಕೃತಿವಾಸನ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.