ADVERTISEMENT

ಟೆಕ್‌ ಮಹೀಂದ್ರ ಲಾಭ ಹೆಚ್ಚಳ

ಪಿಟಿಐ
Published 19 ಅಕ್ಟೋಬರ್ 2024, 14:15 IST
Last Updated 19 ಅಕ್ಟೋಬರ್ 2024, 14:15 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಐ.ಟಿ ಸೇವಾ ಕಂಪನಿ ಟೆಕ್‌ ಮಹೀಂದ್ರ, 2024–25ನೇ ಆರ್ಥಿಕ ವರ್ಷದಲ್ಲಿ ₹1,250 ಕೋಟಿ ನಿವ್ವಳ ಲಾಭಗಳಿಸಿದೆ. 

ಕಳೆದ ವರ್ಷದ ಇದೇ ತ್ರೈಮಾಸಿಕದಲ್ಲಿ ಕಂಪನಿಯು ₹493 ಕೋಟಿ ಲಾಭಗಳಿಸಿತ್ತು. ಇದಕ್ಕೆ ಹೋಲಿಸಿದರೆ ಲಾಭದಲ್ಲಿ ಶೇ 153ರಷ್ಟು ಏರಿಕೆಯಾಗಿದೆ ಎಂದು ಶನಿವಾರ ಕಂಪನಿಯು, ಷೇರುಪೇಟೆಗೆ ಮಾಹಿತಿ ನೀಡಿದೆ.

ವರಮಾನದಲ್ಲಿ ಶೇ 3.49ರಷ್ಟು ಏರಿಕೆಯಾಗಿದ್ದು, ಒಟ್ಟು ₹13,313 ಕೋಟಿ ಗಳಿಸಿದೆ.

ADVERTISEMENT

‘ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ವಲಯದ ಬೆಳವಣಿಗೆ ಮಂದಗತಿಯಲ್ಲಿದೆ. ಇದರ ನಡುವೆಯೂ ಕಾರ್ಯತಂತ್ರದ ಸುಧಾರಣೆ ಫಲವಾಗಿ ಉತ್ತಮ ಪ್ರಗತಿ ಸಾಧಿಸಲಾಗಿದೆ. ಪ್ರತಿ ಷೇರಿಗೆ ₹15 ಮಧ್ಯಂತರ ಲಾಭಾಂಶ ನೀಡಲು ಆಡಳಿತ ಮಂಡಳಿಯು ಅನುಮೋದನೆ ನೀಡಿದೆ’ ಎಂದು ಕಂಪನಿಯು ಸಿಇಒ ಮೋಹಿತ್‌ ಜೋಶಿ ತಿಳಿಸಿದ್ದಾರೆ.‌

ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಕಂಪನಿಯು ಹೊಸದಾಗಿ 6,653 ಉದ್ಯೋಗಿಗಳನ್ನು ನೇಮಿಸಿಕೊಂಡಿದೆ. ಒಟ್ಟು ಉದ್ಯೋಗಿಗಳ ಸಂಖ್ಯೆ 1.54 ಲಕ್ಷ ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.