ನವದೆಹಲಿ: ಟೆಸ್ಲಾ ಕಂಪನಿಯ ಸಿಇಒ ಇಲಾನ್ ಮಸ್ಕ್ ಅವರು ಈ ತಿಂಗಳು ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಇದೇ ವೇಳೆ ದೇಶದಲ್ಲಿ ಕಂಪನಿಯ ಹೂಡಿಕೆ ಬಗ್ಗೆ ಅಧಿಕೃತವಾಗಿ ಘೋಷಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ವರ್ಷದ ಜೂನ್‌ನಲ್ಲಿ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡಿದ್ದ ವೇಳೆ ಮಸ್ಕ್ ಅವರನ್ನು ಭೇಟಿ ಮಾಡಿದ್ದರು. 2024ರಲ್ಲಿ ಭಾರತಕ್ಕೆ ಭೇಟಿ ನೀಡುವುದಾಗಿ ಮಾತುಕತೆ ವೇಳೆ ಮಸ್ಕ್ ಪ್ರಕಟಿಸಿದ್ದರು.
ಕೇಂದ್ರ ಸರ್ಕಾರವು ಇತ್ತೀಚೆಗೆ ಹೊಸ ಎಲೆಕ್ಟ್ರಿಕ್ ವಾಹನ ನೀತಿಗೆ ಅನುಮೋದನೆ ನೀಡಿದೆ. ದೇಶದಲ್ಲಿ ಕನಿಷ್ಠ ₹4,150 ಕೋಟಿ ಬಂಡವಾಳ ಹೂಡಿಕೆ ಮಾಡಿ ಇ.ವಿ ತಯಾರಿಕಾ ಘಟಕ ಸ್ಥಾಪಿಸುವ ಕಂಪನಿಗಳಿಗೆ ಆಮದು ಸುಂಕದಲ್ಲಿ ರಿಯಾಯಿತಿ ಘೋಷಿಸಿದೆ. ಭಾರತದ ಮಾರುಕಟ್ಟೆ ಪ್ರವೇಶಿಸಲು ಮುಂದಾಗಿರುವ ಟೆಸ್ಲಾ ಕಂಪನಿಗೆ ಇದು ವರದಾನವಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.