ನವದೆಹಲಿ: ದ್ವಿಚಕ್ರ ಹಾಗೂ ತ್ರಿಚಕ್ರ ವಾಹನ ತಯಾರಿಕಾ ಕಂಪನಿ ಟಿವಿಎಸ್‌ನ ಡಿಸೆಂಬರ್ ತ್ರೈಮಾಸಿಕದ ನಿವ್ವಳ ಲಾಭದ ಪ್ರಮಾಣವು ಶೇಕಡ 28ರಷ್ಟು ಹೆಚ್ಚಾಗಿದ್ದು, ₹ 304 ಕೋಟಿಗೆ ತಲುಪಿದೆ.
ಹಿಂದಿನ ಹಣಕಾಸು ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ಕಂಪನಿಯ ನಿವ್ವಳ ಲಾಭವು ₹ 237 ಕೋಟಿ ಆಗಿತ್ತು. ಕಂಪನಿಯ ವರಮಾನವು ಈ ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ₹ 8,075 ಕೋಟಿಗೆ ತಲುಪಿದೆ. ಹಿಂದಿನ ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ಇದು ₹ 6,606 ಕೋಟಿ ಆಗಿತ್ತು.
ಡಿಸೆಂಬರ್ ತ್ರೈಮಾಸಿಕದಲ್ಲಿ ಕಂಪನಿಯು ಒಟ್ಟು 8.36 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದೆ. ರಫ್ತಾಗಿರುವ ದ್ವಿಚಕ್ರ ವಾಹನಗಳ ಸಂಖ್ಯೆಯು 2.07 ಲಕ್ಷ. ತ್ರಿಚಕ್ರ ವಾಹನಗಳ ಮಾರಾಟವು 43 ಸಾವಿರಕ್ಕೆ ಇಳಿಕೆ ಕಂಡಿದೆ.
ಪ್ರತಿ ಷೇರಿಗೆ ₹ 5ರಷ್ಟು ಮಧ್ಯಂತರ ಲಾಭಾಂಶ ನೀಡುವುದಾಗಿ ಕಂಪನಿಯ ಆಡಳಿತ ಮಂಡಳಿಯು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.