ಬೆಂಗಳೂರು: ‘ಬೆಂಗಳೂರಿನಲ್ಲಿ ಉಬರ್ ಬಸ್ ಸೇವೆ ಆರಂಭಿಸಲು ಚಿಂತನೆ ನಡೆಸಲಾಗಿದೆ. ಹಲವು ಮಧ್ಯಸ್ಥಗಾರರ ಜೊತೆಗೆ ಮಾತುಕತೆ ಕೂಡ ನಡೆಸಲಾಗುತ್ತಿದೆ’ ಎಂದು ಉಬರ್ ಇಂಡಿಯಾ ಮತ್ತು ದಕ್ಷಿಣ ಏಷ್ಯಾದ ಅಧ್ಯಕ್ಷ ಪ್ರಭಜೀತ್ ಸಿಂಗ್ ತಿಳಿಸಿದ್ದಾರೆ.
ಈಗಾಗಲೇ ಕೋಲ್ಕತ್ತ ಮತ್ತು ದೆಹಲಿಯಲ್ಲಿ ಬಸ್ ಸೇವೆ ಪ್ರಾರಂಭಿಸಲಾಗಿದೆ. ಹೈದರಾಬಾದ್ ಮತ್ತು ಮುಂಬೈನಲ್ಲಿ ಪ್ರಾಯೋಗಿಕವಾಗಿ ಬಸ್ ಸೇವೆ ಆರಂಭಿಸಲು ಸಿದ್ಧತೆ ನಡೆದಿದೆ ಎಂದು ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬೆಂಗಳೂರಿನಲ್ಲಿ ಉಬರ್ ಬಸ್ ಸೇವೆ ಪ್ರಾರಂಭಿಸುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಅನುಮತಿ ನೀಡಬೇಕಿದೆ. ಇದಕ್ಕೆ ಕೆಲವು ನಿಯಮಾವಳಿಗಳನ್ನು ಸಡಿಲಗೊಳಿಸಬೇಕಿದೆ ಎಂದು ಹೇಳಿದರು.
ಹೆಬ್ಬಾಳ ಮತ್ತು ಹೊರವರ್ತುಲ ರಸ್ತೆಯಲ್ಲಿ ಹವಾನಿಯಂತ್ರಿತ ಬಸ್ ಸೇವೆ ಆರಂಭಿಸಬಹುದಾಗಿದೆ. ಇದು ಸಾರ್ವಜನಿಕ ಸಾರಿಗೆಗೆ ಪರ್ಯಾಯ ಆಯ್ಕೆ ಕಲ್ಪಿಸಲಿದೆ. ಸರ್ಕಾರವು ಉಬರ್‌ನ ಈ ಹೊಸ ಯೋಜನೆಗೆ ಅವಕಾಶ ನೀಡಬೇಕಿದೆ ಎಂದು ಕೋರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.