ADVERTISEMENT

ಆಧಾರ್‌ ತಿದ್ದುಪಡಿ: ಹೆಚ್ಚು ಶುಲ್ಕ ವಿಧಿಸಿದರೆ ₹50 ಸಾವಿರ ದಂಡ

ಪಿಟಿಐ
Published 13 ಡಿಸೆಂಬರ್ 2023, 15:58 IST
Last Updated 13 ಡಿಸೆಂಬರ್ 2023, 15:58 IST
ರಾಜೀವ್‌ ಚಂದ್ರಶೇಖರ್‌ –ಪಿಟಿಐ ಚಿತ್ರ
ರಾಜೀವ್‌ ಚಂದ್ರಶೇಖರ್‌ –ಪಿಟಿಐ ಚಿತ್ರ   

ನವದೆಹಲಿ: ಆಧಾರ್‌ ಕಾರ್ಡ್‌ ತಿದ್ದುಪಡಿಗೆ ನಿಗದಿಪಡಿಸಿರುವ ಶುಲ್ಕಕ್ಕಿಂತ ಹೆಚ್ಚು ಹಣ ವಸೂಲಿ ಮಾಡುವ ಆಪರೇಟರ್‌ಗಳ ಸೇವೆಯನ್ನು ಅಮಾನತಿನಲ್ಲಿಡುವ ಜತೆಗೆ, ₹50 ಸಾವಿರ ದಂಡವನ್ನೂ ವಿಧಿಸಲಾಗುವುದು ಎಂದು ಲೋಕಸಭೆಗೆ ಬುಧವಾರ ಕೇಂದ್ರ ಸರ್ಕಾರ ತಿಳಿಸಿದೆ.

‘ಆಧಾರ್‌ ಕಾರ್ಡ್‌ನಲ್ಲಿ ವಯಸ್ಸು, ಲಿಂಗ, ವೈವಾಹಿಕ ಸ್ಥಿತಿಗತಿ ಸೇರಿದಂತೆ ಅಗತ್ಯ ಮಾಹಿತಿಯನ್ನು ಬಯೊಮೆಟ್ರಿಕ್ ವಿಧಾನದ ಮೂಲಕ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಈ ಪ್ರಕ್ರಿಯೆಗೆ ಹೆಚ್ಚಿನ ಶುಲ್ಕ ವಿಧಿಸುವಂತಿಲ್ಲ ಎಂದು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರವು (ಯುಐಡಿಎಐ) ಆಧಾರ್ ದಾಖಲಾತಿ ಏಜೆನ್ಸಿಗಳಿಗೆ ತಿಳಿಸಿದೆ’ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆಯ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

‘ಆದಾಗ್ಯೂ, ನಿಯಮ ಉಲ್ಲಂಘನೆ ಮಾಡುವ ತಿದ್ದುಪಡಿ ಕೇಂದ್ರದ ಆಪರೇಟರ್‌ಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಹೆಚ್ಚಿನ ಶುಲ್ಕ ವಸೂಲಿ ಮಾಡುವುದು ಕಂಡುಬಂದರೆ ಪ್ರಾಧಿಕಾರಕ್ಕೆ ಇ–ಮೇಲ್‌ ಅಥವಾ ಟೋಲ್‌ ಪ್ರೀ ಸಂಖ್ಯೆ 1947ಕ್ಕೆ ಕರೆ ಮಾಡಿ ದೂರು ಸಲ್ಲಿಸಬಹುದು’ ಎಂದು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.