ADVERTISEMENT

ಉಜ್ವಲ: 8 ಕೋಟಿ ಫಲಾನುಭವಿಗಳಿಗೆ6.8 ಕೋಟಿ ಸಿಲಿಂಡರ್‌ ವಿತರಣೆ

ಪಿಟಿಐ
Published 21 ಮೇ 2020, 19:45 IST
Last Updated 21 ಮೇ 2020, 19:45 IST

ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 8 ಕೋಟಿ ಫಲಾನುಭವಿಗಳಿಗೆಏಪ್ರಿಲ್‌ನಿಂದ ಮೇ 15ರವರೆಗೆ 6.8 ಕೋಟಿ ಎಲ್‌ಪಿಜಿ ಸಿಲಿಂಡರ್‌ ವಿತರಿಸಲಾಗಿದೆ ಎಂದು ಪೆಟ್ರೋಲಿಯಂ ಸಚಿವಾಲಯ ತಿಳಿಸಿದೆ.

ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಕೊಡುಗೆಯಲ್ಲಿ ಕೋವಿಡ್‌ನಿಂದ ಸಂಕಷ್ಟಕ್ಕೆ ಒಳಗಾಗಿರುವ ಬಡವರಿಗೆ ಕೇಂದ್ರ ಸರ್ಕಾರವು ಏಪ್ರಿಲ್‌–ಜೂನ್‌ ಅವಧಿಗೆ 14.2 ಕೆ.ಜಿಯ ಮೂರು ಎಲ್‌ಪಿಜಿ ಸಿಲಿಂಡರ್‌ ಉಚಿತವಾಗಿ ನೀಡಲಿದೆ.

ಸಿಲಿಂಡರ್‌ ಖರೀದಿ ವೆಚ್ಚ ಭರಿಸಲು ಚಿಲ್ಲರೆ ಮಾರಾಟದ ಮೊತ್ತವನ್ನು ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು. ಹಣ ಬ್ಯಾಂಕ್ ಖಾತೆಗೆ ಜಮಾ ಆಗಿರುವ ಬಗ್ಗೆ ಗ್ರಾಹಕರು ದೃಢೀಕರಣದ ಎಸ್ಎಂಎಸ್ ಪಡೆಯಲಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.