ನವದೆಹಲಿ: 2024–25ರ ಹಣಕಾಸು ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಕಂಪನಿ ₹825 ಕೋಟಿ ನಿವ್ವಳ ಲಾಭ ಗಳಿಸಿದೆ.
2023–24ರ ಇದೇ ತ್ರೈಮಾಸಿಕದಲ್ಲಿ ₹1,280 ಕೋಟಿ ಲಾಭ ಗಳಿಸಿತ್ತು ಎಂದು ಕಂಪನಿ ಷೇರುಪೇಟೆಗೆ ಸೋಮವಾರ ತಿಳಿಸಿದೆ.
ವರಮಾನವು ₹15,634 ಕೋಟಿಯಾಗಿದ್ದು, ಕಳೆದ ವರ್ಷ ಇದೇ ತ್ರೈಮಾಸಿಕದಲ್ಲಿ ₹16,012 ಕೋಟಿಯಾಗಿತ್ತು. ಕಂಪನಿಯ ಒಟ್ಟು ವೆಚ್ಚವು ₹14,837 ಕೋಟಿಯಾಗಿದೆ ಎಂದು ಕಂಪನಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.