ನವದೆಹಲಿ: 2024–25ರ ಹಣಕಾಸು ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ದೇಶದ ನಗರ ಪ್ರದೇಶದಲ್ಲಿ 15 ವರ್ಷ ಹಾಗೂ ಅದಕ್ಕಿಂತ ಹೆಚ್ಚು ವಯೋಮಾನದವರ ನಿರುದ್ಯೋಗದ ಪ್ರಮಾಣವು ಶೇ 6.4ಕ್ಕೆ ಇಳಿದಿದೆ ಎಂದು ರಾಷ್ಟ್ರೀಯ ಮಾದರಿ ಸಮೀಕ್ಷೆ ಕಚೇರಿ (ಎನ್‌ಎಸ್‌ಎಸ್‌ಒ) ವರದಿ ಸೋಮವಾರ ತಿಳಿಸಿದೆ.
2023–24ರ ಇದೇ ತ್ರೈಮಾಸಿಕದಲ್ಲಿ ನಿರುದ್ಯೋಗ ದರವು ಶೇ 6.6ರಷ್ಟಿತ್ತು ಎಂದು ತಿಳಿಸಿದೆ.
ನಗರ ಪ್ರದೇಶದಲ್ಲಿ ಮಹಿಳೆಯರ ನಿರುದ್ಯೋಗ ಪ್ರಮಾಣವು ಶೇ 8.4ರಷ್ಟಿದೆ. ಕಳೆದ ವರ್ಷದ ಇದೇ ತ್ರೈಮಾಸಿಕದಲ್ಲಿ ಶೇ 8.6ರಷ್ಟಿತ್ತು. ಪುರುಷರ ನಿರುದ್ಯೋಗದ ಪ್ರಮಾಣವು ಶೇ 5.7ರಷ್ಟಿದೆ. ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ಶೇ 5.8ರಷ್ಟಿತ್ತು ಎಂದು ವರದಿ ತಿಳಿಸಿದೆ.
ದೇಶದಲ್ಲಿನ ದುಡಿಯುವ ವರ್ಗದಲ್ಲಿರುವ ನಿರುದ್ಯೋಗಿಗಳ ಶೇಕಡಾವಾರು ಲೆಕ್ಕಾಚಾರ ಆಧರಿಸಿ ಈ ಸಮೀಕ್ಷೆ ನಡೆಸಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.