ಬೆಂಗಳೂರು: ನೈಕ್ ಕಂಪನಿಯು 1,600ಕ್ಕೂ ಹೆಚ್ಚು ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಲು ನಿರ್ಧರಿಸಿದೆ.
ಕಂಪನಿಯ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಕಡಿಮೆಯಾಗಿದೆ. ಹಾಗಾಗಿ, ವೆಚ್ಚವನ್ನು ಸರಿದೂಗಿಸುವ ಭಾಗವಾಗಿ ಉದ್ಯೋಗಿಗಳನ್ನು ವಜಾಗೊಳಿಸಲಾಗುತ್ತಿದೆ. ಈ ಉದ್ಯೋಗ ಕಡಿತ ಪ್ರಕ್ರಿಯೆಯು 2023–24ನೇ ಹಣಕಾಸು ವರ್ಷದ ಕೊನೆಯ ತ್ರೈಮಾಸಿಕದ ವೇಳೆಗೆ ಪೂರ್ಣಗೊಳ್ಳಲಿದೆ. ಇದು ಕಂಪನಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕಂಪನಿ ತಿಳಿಸಿದೆ.
2023ರ ಮಾರ್ಚ್ 31ರ ಮಾಹಿತಿ ಅನ್ವಯ ಕಂಪನಿಯಲ್ಲಿ 83,700 ಉದ್ಯೋಗಿಗಳು ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.