ನವದೆಹಲಿ: ದೇಶದಲ್ಲಿ ಆ್ಯಪಲ್ ಐಫೋನ್ ಉತ್ಪಾದನಾ ಘಟಕ ಸ್ಥಾಪನೆಗೆ ವೇದಾಂತ ಲಿಮಿಟೆಡ್ ಮುಂದಾಗಿದೆ.
ಆ್ಯಪಲ್ ಕಂಪನಿಯ ಐಫೋನ್ ಮತ್ತು ಟಿವಿ, ಇತರ ಉಪಕರಣಗಳನ್ನು ಉತ್ಪಾದಿಸುವ ಘಟಕ ಸ್ಥಾಪಿಸಲು ವೇದಾಂತ ಲಿ. ನಿರ್ಧರಿಸಿದೆ. ಮಹಾರಾಷ್ಟ್ರದಲ್ಲಿ ನೂತನ ಘಟಕ ನಿರ್ಮಿಸುವ ಗುರಿಯಿದೆ ಎಂದು ಸಿಎನ್‌ಬಿಸಿ ಟಿವಿ18ಗೆ ವೇದಾಂತ ಚೇರ್ಮನ್ ಅನಿಲ್ ಅಗರ್‌ವಾಲ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.
ಆದರೆ ಈ ಕುರಿತು ಆ್ಯಪಲ್ ಸಂಸ್ಥೆ ಯಾವುದೇ ಹೇಳಿಕೆ ಬಿಡುಗಡೆ ಮಾಡಿಲ್ಲ.
ನೂತನ ಘಟಕ ಸ್ಥಾಪನೆ ಕುರಿತು ವೇದಾಂತ ಸಮೂಹವನ್ನು ರಾಯಿಟರ್ಸ್ ಸುದ್ದಿಸಂಸ್ಥೆ ಸಂಪರ್ಕಿಸಿದ್ದು, ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ ಎಂದು ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.