ನವದೆಹಲಿ: ಬ್ಯಾಂಕ್ ಆಫ್ ಬರೋಡಾ ಮತ್ತು ದೇನಾ ಬ್ಯಾಂಕ್ ಜತೆ ವಿಲೀನವಾಗಲು ವಿಜಯ ಬ್ಯಾಂಕ್‌ನ ಆಡಳಿತ ಮಂಡಳಿ ಶನಿವಾರ ಒಪ್ಪಿಗೆ ನೀಡಿದೆ.
ವಿಲೀನದಿಂದ ವಹಿವಾಟಿನ ಗಾತ್ರ ಹೆಚ್ಚಾಗಲಿದ್ದು, ಜಾಗತಿಕ ಬ್ಯಾಂಕ್‌ಗಳೊಂದಿಗೆ ಪೈಪೋಟಿ ನೀಡಲು ಸಾಧ್ಯವಾಗಲಿದೆ ಎಂದು ವಿಜಯ ಬ್ಯಾಂಕ್ ಆಡಳಿತ ಮಂಡಳಿ ತಿಳಿಸಿದೆ.
ಮೂರು ಬ್ಯಾಂಕ್‌ಗಳನ್ನು ವಿಲೀನಗೊಳಿಸಿ, ದೇಶದ ಮೂರನೇ ಅತಿದೊಡ್ಡ ಬ್ಯಾಂಕ್ ರಚನೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಈ ಕುರಿತು ಬ್ಯಾಂಕ್‌ಗಳ ಆಡಳಿತ ಮಂಡಳಿಗಳು ಸಭೆ ನಡೆಸಿ ವಿಲೀನ ಪ್ರಸ್ತಾವಕ್ಕೆ ಒಪ್ಪಿಗೆ ಸೂಚಿಸಬೇಕಿದೆ. ಈ ಪ್ರಕ್ರಿಯೆಯಲ್ಲಿ ದೇನಾ ಬ್ಯಾಂಕ್ ವಿಜಯ ಬ್ಯಾಂಕ್‌ಗಳು ತಮ್ಮ ಒಪ್ಪಿಗೆ ಸೂಚಿಸಿವೆ. ಇನ್ನು ಬ್ಯಾಂಕ್ ಆಫ್ ಬರೋಡಾ (ಬಿಒಬಿ) ಒಪ್ಪಿಗೆ ದೊರೆಯಬೇಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.