ADVERTISEMENT

ಸಗಟು ಗೋಧಿ ಬೆಲೆ ₹5 ಇಳಿಕೆ

ಪಿಟಿಐ
Published 15 ಫೆಬ್ರುವರಿ 2023, 15:31 IST
Last Updated 15 ಫೆಬ್ರುವರಿ 2023, 15:31 IST
   

ನವದೆಹಲಿ: ಮುಕ್ತ ಮಾರುಕಟ್ಟೆಗೆ 30 ಲಕ್ಷ ಟನ್ ಗೋಧಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದ ನಂತರದಲ್ಲಿ ಸಗಟು ಹಾಗೂ ಚಿಲ್ಲರೆ ಮಾರುಕಟ್ಟೆಯಲ್ಲಿ ಗೋಧಿ ಬೆಲೆಯು ಕೆ.ಜಿ.ಗೆ ಸರಿಸುಮಾರು ₹ 5ರಷ್ಟು ಕಡಿಮೆ ಆಗಿದೆ ಎಂದು ಆಹಾರ ಕಾರ್ಯದರ್ಶಿ ಸಂಜೀವ್ ಚೋಪ್ರಾ ಹೇಳಿದ್ದಾರೆ.

ಅಗತ್ಯ ಕಂಡುಬಂದರೆ, ಬೆಲೆ ನಿಯಂತ್ರಣಕ್ಕೆ ಇನ್ನಷ್ಟು ಕ್ರಮಗಳನ್ನು ಕೈಗೊಳ್ಳುವುದಾಗಿಯೂ ಅವರು ಹೇಳಿದ್ದಾರೆ. ಗೋಧಿ ಹಾಗೂ ಗೋಧಿ ಹಿಟ್ಟಿನ ಬೆಲೆಯನ್ನು ಸರ್ಕಾರವು ಸೂಕ್ಷ್ಮವಾಗಿ ಗಮನಿಸುತ್ತಿದೆ. ಸಂದರ್ಭ ಬಂದರೆ, ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯ ಅಡಿಯಲ್ಲಿ ಇನ್ನಷ್ಟು ಗೋಧಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಗೋಧಿ ರಫ್ತಿನ ಮೇಲೆ ವಿಧಿಸಿರುವ ನಿಷೇಧವನ್ನು ಹಿಂಪಡೆಯುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸಗಟು ಮಾರುಕಟ್ಟೆಯಲ್ಲಿ ಗೋಧಿಯ ಬೆಲೆಯು ಕೆ.ಜಿ.ಗೆ ₹ 30 ಇದ್ದಿದ್ದು, ₹ 25ಕ್ಕೆ ಇಳಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ₹ 34 ಇದ್ದಿದ್ದು ₹ 29ಕ್ಕೆ ತಗ್ಗಿದೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.