ವಾಷಿಂಗ್ಟನ್: ಎಐ(AI) ಆಧಾರಿತ ಓಪನ್‌ಎಐ(OpenAI) ಕಂಪನಿಯು ಚಾಟ್‌ಜಿಪಿಟಿ (ChatGPT) ಸೃಷ್ಟಿಕರ್ತ ಹಾಗೂ ಸಿಇಒ ಸ್ಯಾಮ್ ಆಲ್ಟ್‌ಮನ್ ಅವರನ್ನು ವಜಾಗೊಳಿಸಿರುವ ಬೆನ್ನಲೇ ಹಂಗಾಮಿ ಸಿಇಒ ಅವರನ್ನು ನೇಮಕ ಮಾಡಿದೆ.
ಕಂಪನಿಯ ಮುಖ್ಯ ತಂತ್ರಜ್ಞಾನ ಅಧಿಕಾರಿ ಮೀರಾ ಮುರಾಟಿ ಅವರನ್ನು ಹಂಗಾಮಿ ಸಿಇಒ ಆಗಿ ನೇಮಕ ಮಾಡಲಾಗಿದೆ ಎಂದು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.
ಆಲ್ಟ್‌ಮನ್ ಅವರನ್ನು ವಜಾಗೊಳಿಸಿರುವುದು ಟೆಕ್ ವಲಯಗಳಲ್ಲಿ ಸಂಚಲನ ಮೂಡಿಸಿದೆ. ನಿನ್ನೆ ನಡೆದ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿತ್ತು.
ಮುರಾಟಿ ಅಲ್ಬೇನಿಯಾದವರು. ವಿದ್ಯಾಬ್ಯಾಸವನ್ನು ಕೆನಡಾದಲ್ಲಿ ಪೂರೈಸಿದ್ದಾರೆ. ಇವರು ಎಂಜಿನಿಯರಿಂಗ್ ಪದವೀಧರೆ ಎಂಬ ಮಾಹಿತಿಗಳು ಲಭ್ಯವಾಗಿವೆ. ಹೆಚ್ಚಿನ ಮಾಹಿತಿಗಳು ಲಭ್ಯವಾಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.