ಬೆಂಗಳೂರು: ದೇಶದ ಪ್ರಮುಖ ಐ.ಟಿ ಕಂಪನಿ ವಿಪ್ರೊ, 2024–25ನೇ ಆರ್ಥಿಕ ವರ್ಷದ ಜೂನ್ ತ್ರೈಮಾಸಿಕದಲ್ಲಿ ₹3,003 ಕೋಟಿ ನಿವ್ವಳ ಲಾಭ ಗಳಿಸಿದೆ.
ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಗಳಿಸಿದ್ದ ಲಾಭಕ್ಕಿಂತ ಶೇ 4.6ರಷ್ಟು ಏರಿಕೆಯಾಗಿದೆ ಎಂದು ಕಂಪನಿಯು ಶುಕ್ರವಾರ ಷೇರುಪೇಟೆಗೆ ತಿಳಿಸಿದೆ.
ಈ ತ್ರೈಮಾಸಿಕದ ವರಮಾನದಲ್ಲಿ ಶೇ 3.8ರಷ್ಟು ಇಳಿಕೆಯಾಗಿದ್ದು, ₹21,963 ಕೋಟಿ ಆಗಿದೆ ಎಂದು ತಿಳಿಸಿದೆ.
₹8,369 ಕೋಟಿಗಿಂತಲೂ ಹೆಚ್ಚು ಮೌಲ್ಯದ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ. ಇದು ಇತ್ತೀಚಿನ ವರ್ಷದ ಒಪ್ಪಂದಗಳಲ್ಲಿ ದೊಡ್ಡ ಮೊತ್ತವಾಗಿದೆ’ ಎಂದು ಕಂಪನಿಯ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ಶ್ರೀನಿ ಪಾಲ್ಲಿಯಾ ತಿಳಿಸಿದ್ದಾರೆ.
‘ಪ್ರಸಕ್ತ ಹಣಕಾಸು ವರ್ಷದಲ್ಲಿ ಕಂಪನಿಯು ಹೊಸದಾಗಿ 10 ಸಾವಿರದಿಂದ 12 ಸಾವಿರ ವೃತ್ತಿಪರರನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಿದೆ’ ಎಂದು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಸೌರಭ್ ಗೋವಿಲ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.