ನವದೆಹಲಿ: ಆಹಾರ ಉತ್ಪನ್ನಗಳು ದುಬಾರಿ ಆಗಿರುವುದರಿಂದ ಸಗಟು ಹಣದುಬ್ಬರ ಸೆಪ್ಟೆಂಬರ್‌ನಲ್ಲಿ ಶೇಕಡ 1.32ಕ್ಕೆ ಏರಿಕೆಯಾಗಿದೆ.
ಸಗಟು ದರ ಸೂಚ್ಯಂಕ (ಡಬ್ಲ್ಯುಪಿಐ) ಆಧರಿಸಿದ ಹಣದುಬ್ಬರ ಆಗಸ್ಟ್‌ನಲ್ಲಿ ಶೇ 0.16ರಷ್ಟಿತ್ತು. 2109ರ ಸೆಪ್ಟೆಂಬರ್‌ನಲ್ಲಿ ಶೇ 0.33ರಷ್ಟು ಇತ್ತು ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಮಾಹಿತಿ ನೀಡಿದೆ.
ಏಪ್ರಿಲ್‌ನಿಂದ ಜುಲೈವರೆಗೆ ಸಗಟು ಹಣದುಬ್ಬರವು ಸೊನ್ನೆಗಿಂತ ಕಡಿಮೆ ಮಟ್ಟದಲ್ಲಿ ಇತ್ತು. ಆಹಾರ ಹಣದುಬ್ಬರ ಆಗಸ್ಟ್‌ನಲ್ಲಿ ಶೇ 3.84ರಷ್ಟಿತ್ತು. ಸೆಪ್ಟೆಂಬರ್‌ನಲ್ಲಿ ಶೇ 8.17ಕ್ಕೆ ಏರಿಕೆಯಾಗಿದೆ.
ತರಕಾರಿಗಳ ಹಣದುಬ್ಬರ ಶೇ 36.54ರಷ್ಟು ಗರಿಷ್ಠ ಮಟ್ಟದಲ್ಲಿದೆ. ಆಲೂಗಡ್ಡೆ ದರ ಶೇ 107ರಷ್ಟು ಹೆಚ್ಚಾಗಿದೆ. ತಯಾರಿಕಾ ವಸ್ತುಗಳ ಹಣದುಬ್ಬರ ಶೇ 1.27ರಿಂದ ಶೇ 1.61ಕ್ಕೆ ಏರಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.