ಬೆಂಗಳೂರು: ₹5,551.27 ಕೋಟಿ ಮೊತ್ತವನ್ನು ಕಾನೂನುಬಾಹಿರವಾಗಿ ಪಾವತಿಸಿರುವ ಆರೋಪದ ಅಡಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಆರೋಪ ಪಟ್ಟಿ ಆಧರಿಸಿ ಸಕ್ಷಮ ಪ್ರಾಧಿಕಾರವು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ ಅಡಿಯಲ್ಲಿ ಶಿಯೋಮಿ ಕಂಪನಿ, ಅದರ ಅಧಿಕಾರಿಗಳು ಹಾಗೂ ಮೂರು ಬ್ಯಾಂಕ್‌ಗಳಿಗೆ ನೋಟಿಸ್ ಜಾರಿಮಾಡಿದೆ.
ಶಿಯೋಮಿ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಮಾಜಿ ವ್ಯವಸ್ಥಾಪಕ ನಿರ್ದೇಶಕ ಮನು ಕುಮಾರ್ ಜೈನ್, ಹಾಲಿ ನಿರ್ದೇಶಕ ಮತ್ತು ಮುಖ್ಯ ಹಣಕಾಸು ಅಧಿಕಾರಿ ಸಮೀರ್ ಬಿ. ರಾವ್, ಸಿಟಿ ಬ್ಯಾಂಕ್, ಎಚ್‌ಎಸ್‌ಬಿಸಿ ಬ್ಯಾಂಕ್ ಮತ್ತು ಡಾಯಿಚ್ ಬ್ಯಾಂಕ್‌ಗಳಿಗೆ ಸಕ್ಷಮ ಪ್ರಾಧಿಕಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
undefined undefined
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.