ADVERTISEMENT

ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ ವಿಲೀನವಾಗಲಿದೆ HDFC ltd; ಷೇರು ಬೆಲೆ ಶೇ10 ಜಿಗಿತ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಏಪ್ರಿಲ್ 2022, 7:23 IST
Last Updated 4 ಏಪ್ರಿಲ್ 2022, 7:23 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದ ಅತಿ ದೊಡ್ಡ ಹೌಸಿಂಗ್‌ ಫೈನಾನ್ಸ್‌ ಕಂಪನಿ ಎಚ್‌ಡಿಎಫ್‌ಸಿ ಲಿಮಿಟೆಡ್‌, ಅತಿ ದೊಡ್ಡ ಖಾಸಗಿ ಬ್ಯಾಂಕ್‌ 'ಎಚ್‌ಡಿಎಫ್‌ಸಿ ಬ್ಯಾಂಕ್‌'ನಲ್ಲಿ ವಿಲೀನವಾಗಲಿದೆ. ಈ ಕುರಿತು ಪ್ರಕಟಣೆ ಹೊರ ಬೀಳುತ್ತಿದ್ದಂತೆ ಎಚ್‌ಡಿಎಫ್‌ಸಿ ಲಿಮಿಟೆಡ್‌ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್‌ ಎರಡರ ಷೇರು ಬೆಲೆ ಶೇಕಡ 10ರಷ್ಟು ಏರಿಕೆ ದಾಖಲಿಸಿತು.

ಎಚ್‌ಡಿಎಫ್‌ಸಿ ಲಿಮಿಟೆಡ್‌ ಪ್ರತಿ ಷೇರು ಬೆಲೆ ₹2,636 ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕ್‌ ಷೇರು ಬೆಲೆ ₹1,630 ತಲುಪಿದೆ. ವಿಲೀನ ಪ್ರಕ್ರಿಯ ಬಳಿಕ 25 ಎಚ್‌ಡಿಎಫ್‌ಸಿ ಲಿಮಿಟೆಡ್‌ ಷೇರುಗಳನ್ನು ಹೊಂದಿರುವ ಹೂಡಿಕೆದಾರರಿಗೆ ಎಚ್‌ಡಿಎಫ್‌ಸಿ ಬ್ಯಾಂಕ್‌ನ 42 ಷೇರುಗಳು ಜಮೆಯಾಗಲಿವೆ.

ಪ್ರಸ್ತುತ ಎಚ್‌ಡಿಎಫ್‌ಸಿ ಲಿಮಿಟೆಡ್‌ನ ಒಟ್ಟು ಆಸ್ತಿ ಮೌಲ್ಯ ₹6.23 ಲಕ್ಷ ಕೋಟಿ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕ್‌ನ ಆಸ್ತಿ ಮೌಲ್ಯ ₹19.38 ಲಕ್ಷ ಕೋಟಿ ಇದೆ. ಎಚ್‌ಡಿಎಫ್‌ಸಿ ಬ್ಯಾಂಕ್‌ 3,000ಕ್ಕೂ ಹೆಚ್ಚು ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಒಟ್ಟು 6,342 ಶಾಖೆಗಳನ್ನು ಹೊಂದಿದ್ದು, 6.8 ಕೋಟಿ ಗ್ರಾಹಕರನ್ನು ಒಳಗೊಂಡಿರುವುದಾಗಿ ವರದಿಯಾಗಿದೆ.

ADVERTISEMENT

ವಿಲೀನ ಪ್ರಕ್ರಿಯೆಯು 2023–2024ನೇ ಹಣಕಾಸು ವರ್ಷದ ಎರಡು ಮತ್ತು ಮೂರನೇ ತ್ರೈಮಾಸಿಕದಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.