ADVERTISEMENT

ಷೇರು ವಿಕ್ರಯ: ಪರಿಶೀಲನೆಗೆ ಸಮಿತಿ ರಚನೆ

ಪಿಟಿಐ
Published 30 ಜೂನ್ 2019, 19:31 IST
Last Updated 30 ಜೂನ್ 2019, 19:31 IST
ಐಎಲ್‌ಆ್ಯಂಡ್‌ಎಫ್‌ಎಸ್‌
ಐಎಲ್‌ಆ್ಯಂಡ್‌ಎಫ್‌ಎಸ್‌   

ನವದೆಹಲಿ: ಷೇರು ವಿಕ್ರಯದ ಸಾಧ್ಯತೆಗಳನ್ನು ಪರಿಶೀಲಿಸಲುನಷ್ಟದಲ್ಲಿರುವ ಐಎಲ್‌ಆ್ಯಂಡ್‌ಎಫ್‌ಎಸ್‌ ಸಂಸ್ಥೆಯು ಉಪ ಸಮಿತಿ ರಚಿಸಿದೆ.

ಜೂನ್‌ 28ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈನಿರ್ಧಾರ ಕೈಗೊಳ್ಳಲಾಗಿದೆ. ಸಮಿತಿಯು ನಾಲ್ವರು ನಿರ್ದೇಶಕರನ್ನು ಒಳಗೊಂಡು ಒಟ್ಟಾರೆ ಆರು ಸದಸ್ಯರನ್ನು ಹೊಂದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಂಸ್ಥೆಯ ಮೌಲ್ಯವನ್ನು ವೃದ್ಧಿಸಲು ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳುವ ಅಧಿಕಾರವನ್ನು ಸಮಿತಿಗೆ ನೀಡಲಾಗುವುದು ಎಂದು ತಿಳಿಸಿದೆ.

ದೇಶಿ ಮತ್ತು ವಿದೇಶದಲ್ಲಿ ಇರುವ ಆಸ್ತಿಗಳನ್ನು ಮಾರಾಟ ಮಾಡುವ ಕುರಿತು ಸಭೆಯಲ್ಲಿ ಪರಿಶೀಲನೆ ನಡೆಸಲಾಗಿದೆ ಎಂದೂ ಹೇಳಿದೆ.

ADVERTISEMENT

ಸುಸ್ತಿ ಸಾಲ ವಸೂಲಿಗೆ ಸಂಬಂಧಿಸಿದಂತೆ ಆರ್‌ಬಿಐ ಜೂನ್‌ 7ರಂದು ಹೊಸ ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಿದೆ. ಅದಕ್ಕೆ ಅನುಗುಣವಾಗಿ ಆಸ್ತಿಗಳನ್ನು ಮಾರಾಟ ಮಾಡಿ ನಷ್ಟ ದಿಂದ ಹೊರಬರಲು ಉದ್ದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.