ನವದೆಹಲಿ: 2023–24ನೇ ಹಣಕಾಸು ವರ್ಷದ ಡಿಸೆಂಬರ್ ತ್ರೈಮಾಸಿಕದ ವರದಿ ಬಿಡುಗಡೆಯಾದ ಬೆನ್ನಲ್ಲೇ ಶುಕ್ರವಾರ ಇನ್ಫೊಸಿಸ್ ಷೇರಿನ ಮೌಲ್ಯ ಶೇ 8ರಷ್ಟು ಏರಿಕೆಯಾಗಿದ್ದರೆ, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಷೇರಿನ ಮೌಲ್ಯ ಶೇ 4ರಷ್ಟು ಹೆಚ್ಚಳವಾಗಿದೆ.
ಇನ್ಫೊಸಿಸ್ ಮಾರುಕಟ್ಟೆ ಮೌಲ್ಯ ₹6,69,135 ಕೋಟಿಗೆ ತಲುಪಿದೆ. ಒಂದೇ ದಿನ ಕಂಪನಿಯ ಮಾರುಕಟ್ಟೆ ಮೌಲ್ಯಕ್ಕೆ ₹48,652 ಕೋಟಿ ಸೇರ್ಪಡೆಯಾಗಿದೆ.
ಸೆನ್ಸೆಕ್ಸ್‌ನಲ್ಲಿ ಕಂಪನಿಯ ಷೇರಿನ ಮೌಲ್ಯ ಶೇ 7.84ರಷ್ಟು ಹೆಚ್ಚಾಗಿದ್ದು, ಪ್ರತಿ ಷೇರಿನ ಬೆಲೆ ₹1,612ಕ್ಕೆ ಮುಟ್ಟಿದೆ. ಆರಂಭಿಕ ವಹಿವಾಟಿನಲ್ಲಿ ಷೇರಿನ ಮೌಲ್ಯವು ಶೇ 8ರಷ್ಟು ಏರಿಕೆಯಾಗಿತ್ತು. ಎನ್‌ಎಸ್‌ಇಯಲ್ಲಿ ಷೇರಿನ ಮೌಲ್ಯವು ಶೇ 8ರಷ್ಟು ಏರಿಕೆಯಾಗಿದ್ದು, ಪ್ರತಿ ಷೇರಿನ ಬೆಲೆ ₹1,615 ಆಗಿದೆ.
ಟಿಸಿಎಸ್ ₹53,239 ಕೋಟಿ ಗಳಿಕೆ:
ಷೇರಿನ ಮೌಲ್ಯ ಏರಿಕೆ ಕಂಡಿದ್ದರಿಂದ ಟಿಸಿಎಸ್ ಮಾರುಕಟ್ಟೆ ಮೌಲ್ಯವು ₹14,20,333 ಕೋಟಿಗೆ ತಲುಪಿದೆ. ಕಂಪನಿಯ ಮಾರುಕಟ್ಟೆ ಮೌಲ್ಯಕ್ಕೆ ಒಂದೇ ದಿನ ₹53,239 ಕೋಟಿ ಸೇರ್ಪಡೆಯಾಗಿದೆ.
ಬಿಎಸ್‌ಇಯಲ್ಲಿ ಟಿಸಿಎಸ್‌ನ ಷೇರಿನ ಮೌಲ್ಯ ಶೇ 3.89ರಷ್ಟು ಏರಿಕೆಯಾಗಿದೆ. ಪ್ರತಿ ಷೇರಿನ ಬೆಲೆ ₹3,881ಕ್ಕೆ ತಲುಪಿದೆ. ಎನ್‌ಎಸ್‌ಇಯಲ್ಲಿ ಷೇರಿನ ಮೌಲ್ಯ ಶೇ 3.91ರಷ್ಟು ಏರಿಕೆ ಕಂಡಿದ್ದು, ಪ್ರತಿ ಷೇರಿನ ಬೆಲೆ ₹3,881 ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.