ADVERTISEMENT

ಕೇಂದ್ರ ಬಜೆಟ್ ಮಂಡನೆ: ‍ಷೇರುಪೇಟೆಯಲ್ಲಿ ಉತ್ಸಾಹ

ಪಿಟಿಐ
Published 23 ಜುಲೈ 2024, 6:00 IST
Last Updated 23 ಜುಲೈ 2024, 6:00 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ನವದೆಹಲಿ: ಷೇರುಪೇಟೆಯಲ್ಲಿ ಮಂಗಳವಾರ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್‌ 264 ಅಂಶಗಳ ಏರಿಕೆ ಕಂಡಿದೆ. ಇಂದು ಕೇಂದ್ರ ಬಜೆಟ್ ಮಂಡನೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಬೈ ಷೇರುಪೇಟೆ ಸೂಚ್ಯಂಕದಲ್ಲಿ ಗಮನಾರ್ಹವಾದ ಏರಿಕೆ ಕಂಡಿದೆ.

ಪ್ರಮುಖ 30 ಷೇರುಗಳ ಬಿಎಸ್‌ಇ ಸೆನ್ಸೆಕ್ಸ್‌ 264.33 ಅಂಶಗಳಷ್ಟು ಏರಿಕೆ ಕಂಡು 80,766.41ರಷ್ಟು ವಹಿವಾಟು ಆರಂಭಿಸಿದರೆ, ಎನ್‌ಎಸ್‌ಇ ನಿಫ್ಟಿ 73.3 ಅಂಶಗಳಷ್ಟು ಜಿಗಿದು 24,582.55ಕ್ಕೆ ಅಂಶಗಳಲ್ಲಿ ವಹಿವಾಟು ಆರಂಭಿಸಿದೆ.

ADVERTISEMENT

ಸೆನ್ಸೆಕ್ಸ್‌ನಲ್ಲಿ ಅಲ್ಟ್ರಾಟೆಕ್ ಸಿಮೆಂಟ್, ಮಹೀಂದ್ರಾ ಮತ್ತು ಮಹೀಂದ್ರಾ, ಐಟಿಸಿ, ಲಾರ್ಸನ್ ಮತ್ತು ಟೂಬ್ರೊ ಮತ್ತು ಎನ್‌ಟಿಪಿಸಿ ಅತಿ ಹೆಚ್ಚು ಲಾಭ ಗಳಿಸಿವೆ.

ಎಚ್‌ಸಿಎಲ್ ಟೆಕ್, ಪವರ್ ಗ್ರಿಡ್, ಜೆಎಸ್‌ಡಬ್ಲ್ಯೂ ಸ್ಟೀಲ್ ಮತ್ತು ಟಾಟಾ ಸ್ಟೀಲ್ ಷೇರಿನ ಮೌಲ್ಯದಲ್ಲಿ ಕುಸಿದಿದೆ.

‘ಈ ಬಜೆಟ್‌ನಲ್ಲಿ ಷೇರು ಹೂಡಿಕೆಯಲ್ಲಿನ LTCGs ತೆರಿಗೆ ಏರಿಕೆ ಮಾಡಲಾಗುತ್ತದೆಯೇ ಎಂಬ ಬಗ್ಗೆ ಹೂಡಿಕೆದಾರರು ತೀವ್ರ ಗಮನ ಹರಿಸುತ್ತಿದ್ದಾರೆ. ಒಂದು ವೇಳೆ ಈ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲದಿದ್ದರೇ ಷೇರು ಮಾರುಕಟ್ಟೆಯ ಹೂಡಿಕೆದಾರರಿಗೆ ಸ್ವಲ್ಪ ಮಟ್ಟಿನ ಚೇತರಿಕೆ ಸಿಗಲಿದೆ ಎನ್ನಲಾಗಿದೆ’ ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವಿಸಸ್‌ನ ಮುಖ್ಯ ಹೂಡಿಕೆ ತಂತ್ರಜ್ಞ ವಿ.ಕೆ. ವಿಜಯಕುಮಾರ್ ಹೇಳಿದರು.

ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್‌ಐಐ) ಸೋಮವಾರ ಒಟ್ಟು ₹3,444.06 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ ಎಂದು ವಿನಿಮಯ ಕೇಂದ್ರ ಮಾಹಿತಿಯಿಂದ ತಿಳಿದುಬಂದಿದೆ.

ಏಷ್ಯಾ ಪೇರುಪೇಟೆಗಳ ಪೈಕಿ ಸೋಲ್‌ ಏರುಗತಿಯಲ್ಲಿದ್ದರೆ, ಟೋಕಿಯೊ, ಶಾಂಘೈ ಮತ್ತು ಹಾಂಗ್ ಕಾಂಗ್ ಷೇರುಪೇಟೆಯಲ್ಲಿ ಇಳಿಕೆ ಕಂಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.