ನವದೆಹಲಿ: ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ, 2023–24ನೇ ಆರ್ಥಿಕ ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ಒಟ್ಟು ₹1,975 ಕೋಟಿ ನಿವ್ವಳ ಲಾಭ ಗಳಿಸಿದೆ. ಕಳೆದ ಹಣಕಾಸು ವರ್ಷದ ಇದೇ ಅವಧಿಗೆ ಹೋಲಿಸಿದರೆ ಲಾಭದಲ್ಲಿ ಶೇ 8ರಷ್ಟು ಹೆಚ್ಚಳವಾಗಿದೆ.
ಮೂರನೇ ತ್ರೈಮಾಸಿಕದಲ್ಲಿ ಕಾರ್ಯಾಚರಣೆ ವರಮಾನವು ₹3,517 ಕೋಟಿಗೆ ಏರಿಕೆಯಾಗಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಗೆ ಹೋಲಿಸಿದರೆ ವರಮಾನದಲ್ಲಿ ಶೇ 25ರಷ್ಟು ಹೆಚ್ಚಳವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.
ಷೇರು ವ್ಯವಹಾರ ಹೊರತುಪಡಿಸಿ ಷೇರು ನೋಂದಣಿ, ಸೂಚ್ಯಂಕ ಸೇವೆ ಮತ್ತು ದತ್ತಾಂಶ ಸೇವೆಯಿಂದ ನಿಫ್ಟಿಯ ವರಮಾನ ಹೆಚ್ಚಳವಾಗಿದೆ. 2023–24ನೇ ಹಣಕಾಸು ವರ್ಷದ ಮೊದಲ ಒಂಬತ್ತು ತಿಂಗಳ ಅವಧಿಯಲ್ಲಿ ವಾಯಿದಾ ವಹಿವಾಟಿನ ಮೇಲಿನ ಷೇರು ವಹಿವಾಟು ತೆರಿಗೆ (ಎಸ್‌ಟಿಟಿ) ರೂಪದಲ್ಲಿ ₹28,131 ಕೋಟಿಯನ್ನು ಸರ್ಕಾರದ ಖಜಾನೆಗೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.